LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕುಂಬಳಕಾಯಿ ಬೀಜ ಚಿಕ್ಕದಾದರೂ ಅದರ ಪ್ರಯೋಜನಗಳು ಅಪಾರ

ಕುಂಬಳಕಾಯಿಯು (Pumpkin) ಭಾರತದಲ್ಲಿ ತರಕಾರಿಗಳಲ್ಲಿ ಪ್ರಸಿದ್ಧಿ ಪಡೆದ ಒಂದು ವಿಶಿಷ್ಠವಾದ ತರಕಾರಿ (special vegetable). ವಿಶೇಷವಾಗಿ ಚಳಿಗಾಲದಲ್ಲಿ ಇದನ್ನು ಹೆಚ್ಚಾಗಿ ಉತ್ಪಾದನೆ ಮಾಡಲಾಗುತ್ತದೆ.

ಕುಂಬಳಕಾಯಿ ತರಕಾರಿ ಮಾಡುವಾಗ ಬಹಳಷ್ಟು ‌ಜನರು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ನಿಮಗೆ ಗೊತ್ತಾ. ವಿಶ್ವದ 100 ಅತ್ಯಂತ ಶಕ್ತಿಶಾಲಿ ಆಹಾರಗಳ ಪಟ್ಟಿಯನ್ನು BBCಯು ಸಿದ್ಧಪಡಿಸಿದೆ. ಇದರಲ್ಲಿ ಕುಂಬಳಕಾಯಿ ಬೀಜ ಆರನೇ ಸ್ಥಾನವನ್ನು ಪಡೆದಿದೆ.

ಕುಂಬಳಕಾಯಿ ಬೀಜಗಳು ಪೌಷ್ಠಿಕಾಂಶದ ವಿಷಯದಲ್ಲಿ ಮೀನಿಗಿಂತಲೂ ಹೆಚ್ಚು ಶಕ್ತಿಯುತವಾಗಿವೆ ಎಂಬುದು ಇನ್ನೊಂದು ಆಶ್ಚರ್ಯಕರ ಸಂಗತಿ.

* ಕುಂಬಳಕಾಯಿ ಬೀಜಗಳು ಕೂದಲು ಉದುರುವುದನ್ನು ತಡೆಯುತ್ತವೆ. ಇದರಲ್ಲಿನ ಫೈಟೊಕೆಮಿಕಲ್ ಸಂಯುಕ್ತಗಳು (Phytochemical compounds) ಕೂದಲು ಉದುರುವಿಕೆಗೆ ಕಾರಣವಾಗುವ ಹಾರ್ಮೋನ್ ಡೈಹೈಡ್ರೊಟೆಸ್ಟೊಸ್ಟೆರಾನ್ (ಡಿಎಚ್ ಟಿ) ಉತ್ಪಾದನೆಯನ್ನು ತಡೆಗಟ್ಟಲು ಸಹಾಯ ಮಾಡುತ್ತವೆ.

ಡಿಎಚ್ ಟಿ ಮಟ್ಟವನ್ನು ಕಡಿಮೆ ಮಾಡುವ ಮೂಲಕ, ಕುಂಬಳಕಾಯಿ ಬೀಜಗಳು ಕೂದಲು ಉದುರುವಿಕೆ ನಿಧಾನಗೊಳಿಸಿ, ಇರುವ ಕೂದಲನ್ನು ಸಂರಕ್ಷಿಸಲು (To preserve existing hair) ಸಹಾಯ ಮಾಡುತ್ತದೆ.

* ಈ ಬೀಜಗಳಲ್ಲಿ ಇರುವ ಸತುವು ದೇಹವನ್ನು ಸೋಂಕುಗಳ ವಿರುದ್ಧ ಹೋರಾಡುವ ಸಾಮರ್ಥ್ಯ ನೀಡುತ್ತದೆ. ಪ್ರತಿರಕ್ಷಣಾ ವ್ಯವಸ್ಥೆಯನ್ನು (The immune system) ಬಲಪಡಿಸುತ್ತದೆ.

* ಇದರಲ್ಲಿರುವ ಕ್ಯಾರೊಟಿನಾಯ್ಡ್‌ಗಳು ಮತ್ತು ಆಂಟಿಆಕ್ಸಿಡೆಂಟ್‌ಗಳು ದೇಹದಲ್ಲಿನ ಸ್ವತಂತ್ರ ರಾಡಿಕಲ್‌ಗಳ ವಿರುದ್ಧ ಕೆಲಸ ಮಾಡುತ್ತವೆ.

* ವಿಟಮಿನ್ ಇ ಹೊಂದಿರುವುದರಿಂದ ಉರಿಯೂತವನ್ನು ಕಡಿಮೆ ಮಾಡುವ ಮೂಲಕ ರೋಗನಿರೋಧಕ ಶಕ್ತಿಯನ್ನು (Immunity) ಹೆಚ್ಚಿಸುತ್ತದೆ.



* ಕುಂಬಳಕಾಯಿ ಬೀಜಗಳು ಕಬ್ಬಿಣ ಮತ್ತು ಮ್ಯಾಂಗನೀಸ್‌ನ ಮೂಲವಾಗಿವೆ. ದೇಹದಲ್ಲಿನ ರಕ್ತಹೀನತೆಯನ್ನು (Anemia) ತೆಗೆದು ಹಾಕುವಲ್ಲಿ ಕಬ್ಬಿಣವು ಸಹಾಯಕವಾದರೆ, ಮ್ಯಾಂಗನೀಸ್ ದೇಹ ಮತ್ತು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.

* ಕುಂಬಳಕಾಯಿ ಬೀಜಗಳಲ್ಲಿ ಮೆಗ್ನೀಸಿಯಮ್, ರಂಜಕ ಮತ್ತು ಸತುವು (Magnesium, phosphorus and zinc) ಉತ್ತಮ ಪ್ರಮಾಣದಲ್ಲಿದ್ದು, ಮೂಳೆ ಸಾಂದ್ರತೆಯನ್ನು ಕಾಪಾಡಿಕೊಳ್ಳಲು ಮತ್ತು ಆಸ್ಟಿಯೊಪೊರೋಸಿಸ್ ಅನ್ನು ತಡೆಯಲು ಅಗತ್ಯವಾಗಿ ಇವು ಬೇಕು.



* ಈ ಬೀಜಗಳ ನಿಯಮಿತ ಸೇವನೆಯಿಂದ ಮೂಳೆಗಳು ಬಲಗೊಳ್ಳುತ್ತವೆ.

* ಕುಂಬಳಕಾಯಿ ಬೀಜಗಳು ಇನ್ಸುಲಿನ್ ಅನ್ನು ಸುಧಾರಿಸಿ, ಮಧುಮೇಹದ ತೊಂದರೆಗಳನ್ನು ತಡೆಯುತ್ತವೆ (Improve insulin, prevent complications of diabetes).

* ಇದರಲ್ಲಿರುವ ಪ್ರೋಟೀನ್ ಮತ್ತು ಫೈಬರ್ ಹಸಿವು ಮತ್ತು ತೂಕವನ್ನು ನಿಯಂತ್ರಿಸುತ್ತದೆ. ಇನ್ನೂ 100 ಗ್ರಾಂ ಕುಂಬಳಕಾಯಿ ಬೀಜಗಳು ಕೇವಲ 164 ಕ್ಯಾಲೊರಿಗಳನ್ನು ಹೊಂದಿವೆ (100 grams of pumpkin seeds has only 164 calories) ಎಂದು ವರದಿಗಳು ತಿಳಿಸಿವೆ.



* ಹೃದಯದ ಲಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಒಮೆಗಾ -3 ಮತ್ತು ಒಮೆಗಾ -6 ಕೊಬ್ಬಿನಾಮ್ಲಗಳು ಉರಿಯೂತ, ಕೆಟ್ಟ ಕೊಲೆಸ್ಟ್ರಾಲ್ (LDL) ಅನ್ನು ಕಡಿಮೆ ಮಾಡುತ್ತದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್