Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Entertainment News

ಅಂಬೇಡ್ಕರ್, ಬಾಬು ಜಗಜೀವನ್ ರಾಂ ಪ್ರಶಸ್ತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನ್ ರಾಂ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು
, ಅರ್ಜಿ ಸಲ್ಲಿಕೆ ಅವಧಿಯನ್ನು ಮಾರ್ಚ್ 15 ರವರೆಗೆ ವಿಸ್ತರಿಸಲಾಗಿದೆ.

     ಏಪ್ರಿಲ್ 05ರಂದು ಡಾ.ಬಾಬು ಜಗಜೀವನ್ ರಾಂ ಅವರ 119ನೇ ಜನ್ಮ ದಿನಾಚರಣೆ ಮತ್ತು ಏಪ್ರಿಲ್ 14ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ರಾಜ್ಯಮಟ್ಟದಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 35 ವರ್ಷ ವಯಸ್ಸಾಗಿರಬೇಕು. ಒಬ್ಬ ವ್ಯಕ್ತಿಯು ಕೇವಲ ಒಂದು ಪ್ರಶಸ್ತಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಒಬ್ಬ ವ್ಯಕ್ತಿಯನ್ನು ಒಂದು ಪ್ರಶಸ್ತಿಗೆ ಮಾತ್ರ ಆಯ್ಕೆ ಮಾಡಲಾಗುವುದು. ಪ್ರಶಸ್ತಿಗೆ ಯಾವುದೇ ಜನಾಂಗದ ವ್ಯಕ್ತಿ ಅರ್ಜಿ ಸಲ್ಲಿಸಬಹುದು. ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ವ್ಯಕ್ತಿಯು ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರಬಾರದು.  ರಾಜ್ಯ ಮಟ್ಟದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ 10 ಜನ ಹಾಗೂ ಜಗಜೀವನ್ ರಾಮ್ ಪ್ರಶಸ್ತಿಗೆ 10 ಜನರನ್ನು ಆಯ್ಕೆ ಮಾಡಲಾಗುತ್ತದೆ. ಪ್ರಶಸ್ತಿಗಳನ್ನು ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.

      ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು 2026ರ ಮಾರ್ಚ್ 15 ರೊಳಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ನಮೂನೆಗಳನ್ನು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕೆಲಸದ ವೇಳೆಯಲ್ಲಿ ಪಡೆದುಕೊಳ್ಳಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ