LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ : ಕರ್ನಾಟಕ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತದಿಂದ 2025-2026ನೇ ಸಾಲಿಗೆ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಗಳಾಗಿದ್ದು, ಪ್ರವರ್ಗ-1ರ 6(ಎ) ಯಿಂದ 6(ಎಕೆ) ವರೆಗೆ ಬರುವ ಬೆಸ್ತ, ಅಂಬಿಗ, ಅಂಬಿ, ಗಂಗಾಮತ, ಕಬ್ಬಲಿಗೆ, ಕೋಲಿ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಆದಾಯ ಮತ್ತು ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ಆಸಕ್ತರು, ಅರಿವು ಶೈಕ್ಷಣಿಕ ಸಾಲ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ನೇರಸಾಲ ಮತ್ತು ಸಹಾಯ ಧನ, ಸ್ವಾವಲಂಭಿ ಸಾರಥಿ ಯೋಜನೆಗಳಿಗೆ ಸೇವಾಸಿಂಧು ತಂತ್ರಾAಶ ಪೋರ್ಟ್ಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರಿವು ಶೈಕ್ಷಣಿಕ ಸಾಲ ಯೋಜನೆ ಅರ್ಜಿ ಸಲ್ಲಿಸಲು ಕಾಲಮಿತಿ ಇಲ್ಲ. ಇತರೆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಜುಲೈ 04 ಕೊನೆಯ ದಿನವಾಗಿದೆ. ಯೋಜನೆಗಳ ಮಾರ್ಗಸೂಚಿ, ಅಗತ್ಯ ವಿರುವ ಶೈಕ್ಷಣಿಕ ಅರ್ಹತೆ, ವಯೋಮಾನ, ಕುಟುಂಬ ಆದಾಯಮಿತಿ, ಸಹಾಯಧನ ಸೇರಿದಂತೆ ಇತರೆ ಮಾಹಿತಿಗಾಗಿ ನಿಗಮದ ವೆಬ್‌ಸೈಟ್  https://ambigaradevelopment.karnataka.gov.in   ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 08022864099 ಗೆ ಕರೆ ಮಾಡಬಹುದು. ಇದರ ಜೊತೆಗೆ ಜಿಲ್ಲಾ ವ್ಯವಸ್ಥಾಪಕರು ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಗಳನ್ನು ಸಂಪರ್ಕಿಸಿ ವಿಚಾರಿಸಬಹುದು ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪಾ ತಿಳಿಸಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026