LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ದ್ವಿಗುಣ ಹೋರಾಟಕ್ಕೆ ಅಮಿತ್ ಶಾ ಸಲಹೆ'- ವಿಜಯೇಂದ್ರ

ಬೆಂಗಳೂರು :ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಮ್ಮ ಹೋರಾಟವನ್ನು ದ್ವಿಗುಣಗೊಳಿಸಬೇಕೆಂಬ ವಿಷಯದಲ್ಲಿ ಕೇಂದ್ರ ಗೃಹ ಸಚಿವ ಮತ್ತು ಪಕ್ಷದ ರಾಷ್ಟ್ರೀಯ ಮುಖಂಡ ಅಮಿತ್ ಶಾ ಜೀ ಅವರು ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದು ಮುಂಜಾನೆ ನಾನು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಆರ್.ಅಶೋಕ್, ಅರವಿಂದ ಬೆಲ್ಲದ್ ಅವರ ಜೊತೆಗೂಡಿ ಮಾನ್ಯ ಅಮಿತ್ ಶಾ ಜೀ ಅವರನ್ನು ಭೇಟಿ ಮಾಡಿದ್ದೇವೆ. ರಾಜ್ಯ ರಾಜಕಾರಣ, ಪ್ರಸ್ತುತ ಬೆಳವಣಿಗೆಗಳ ಕುರಿತು ಚರ್ಚಿಸಿದ್ದೇವೆ ಎಂದು ವಿವರಿಸಿದರು.

ಅಲ್ಪಸಂಖ್ಯಾತರ ಓಲೈಕೆ ನಿಟ್ಟಿನಲ್ಲಿ ರಾಜ್ಯ ಸರಕಾರ ತೀರ್ಮಾನ ತೆಗೆದುಕೊಳ್ಳುತ್ತಿದೆ. ನಿನ್ನೆ ವಸತಿ ಇಲಾಖೆಯಡಿ ಅಲ್ಪಸಂಖ್ಯಾತರಿಗೆ ಶೇ 10 ಇದ್ದ ಮೀಸಲಾತಿಯನ್ನು ಶೇ 15ಕ್ಕೆ ಏರಿಸಿದ್ದಾರೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರು ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಔರ್ ಸಬ್ ಕಾ ಪ್ರಯಾಸ್’ ಆಧಾರದ ಮೇಲೆ ದೇಶದ ಹಿಂದೂಗಳು, ಅಲ್ಪಸಂಖ್ಯಾತರು ಸೇರಿ ಎಲ್ಲರಿಗೂ ನ್ಯಾಯ ಕೊಡುತ್ತಿದ್ದಾರೆ. ಮೋದಿಜೀ ಅವರು ಕೊಟ್ಟ ಕಿಸಾನ್ ಸಮ್ಮಾನ್ ಯೋಜನೆಯು ರೈತರಿಗೆ 6 ಸಾವಿರ ಜಮಾ ಆಗುತ್ತಿದ್ದು, ಇದು ಕೇವಲ ಹಿಂದೂಗಳಿಗೆ ಮಾತ್ರ ಅಲ್ಲ ಎಂದು ಗಮನ ಸೆಳೆದರು. ರೈತಾಪಿ ವರ್ಗದ ಎಲ್ಲ ಸಮುದಾಯ, ಧರ್ಮದವರಿಗೆ ಅದು ಜಮಾ ಆಗುತ್ತಿದೆ ಎಂದು ವಿವರಿಸಿದರು.

ಮೋದಿಜೀ ಅವರ ಬೇಟಿ ಬಚಾವೊ, ಬೇಟಿ ಪಡಾವೊ ಕಾರ್ಯಕ್ರಮವು ಕೇವಲ ಹಿಂದೂ ಹೆಣ್ಮಕ್ಕಳಿಗೆ ಮಾತ್ರ ಸೀಮಿತವಾಗಿಲ್ಲ. ಆದರೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಡೆದಾಳುವ ನೀತಿ ಅನುಸರಿಸುತ್ತಿದ್ದಾರೆ. ಖಂಡಿತವಾಗಿ ಭಗವಂತ ಒಳ್ಳೆಯದು ಮಾಡಲು ಸಾಧ್ಯವಿಲ್ಲ; ಬಿಜೆಪಿ ಹೋರಾಟ ಒಂದು ಕಡೆ ಇದ್ದರೆ, ಮುಖ್ಯಮಂತ್ರಿಗಳ ನಡವಳಿಕೆ ಅವರ ಸ್ಥಾನಕ್ಕೆ ಅಪಮಾನ ಮಾಡುವಂತಿದೆ ಎಂದು ಆಕ್ಷೇಪಿಸಿದರು.

ಜನರಿಂದ ಸರಕಾರಕ್ಕೆ ತಕ್ಕ ಉತ್ತರ..
ರಾಜ್ಯದ ಮುಖ್ಯಮಂತ್ರಿ ಎಂಬುದನ್ನು ಮರೆತು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಬರುವ ದಿನಗಳಲ್ಲಿ ರಾಜ್ಯದ ಜನರೇ ಅವರಿಗೆ ಉತ್ತರ ನೀಡುತ್ತಾರೆ ಎಂದು ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಜೆಡಿಎಸ್ ಜೊತೆ ಸಮನ್ವಯಕ್ಕಾಗಿ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕರ ಜೊತೆ ಅಧಿವೇಶನಕ್ಕೆ ಮೊದಲು ಚರ್ಚೆ ಮಾಡುವುದಾಗಿ ಅವರು ಪ್ರಶ್ನೆಗೆ ಉತ್ತರ ನೀಡಿದರು.

ಲಂಚ ಇಲ್ಲದೇ ಕೆಲಸಗಳು ಆಗುತ್ತಿಲ್ಲ..

ವಸತಿ ಹಂಚಿಕೆಗೆ ಹಣ ಕೊಡಬೇಕೆಂಬ ಕಾಂಗ್ರೆಸ್ಸಿನ ಬಿ.ಆರ್.ಪಾಟೀಲ್ ಅವರ ಆರೋಪ ಕುರಿತ ಧ್ವನಿಸುರುಳಿ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಬಳಿಕ ಹೈಕಮಾಂಡಿನ ಎಟಿಎಂ ಆಗಿ ಸರಕಾರವನ್ನು ಪರಿವರ್ತನೆಗೊಳಿಸಿದೆ. ಹಿಂದೆ ಬಿಜೆಪಿಯ ಸರಕಾರದ ವಿರುದ್ಧ ಶೇ 40 ರ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದರು. ಇವತ್ತು ಜನಸಾಮಾನ್ಯರು, ಉದ್ಯಮಿಗಳು ಸೇರಿ ಯಾರನ್ನೇ ಕೇಳಿದರೂ ಶೇ 100 ಭ್ರಷ್ಟಾಚಾರ ನಡೆಯುವ ಬಗ್ಗೆ ಜನಸಾಮಾನ್ಯರೇ ಮಾತನಾಡುತ್ತಿದ್ದಾರೆ. ಈ ರೀತಿ ಭ್ರಷ್ಟಾಚಾರದಲ್ಲಿ ಮುಳುಗಿ ಹೋದ ಬಗ್ಗೆ ಸ್ವತಃ ಆಡಳಿತ ಪಕ್ಷದ ಶಾಸಕರೇ ಬಹಿರಂಗ ಪಡಿಸಿದ್ದಾರೆ. ಯಾವುದೇ ಇಲಾಖೆಗೆ ಹೋದರೂ ಲಂಚ ಇಲ್ಲದೇ ಕೆಲಸಗಳು ಆಗುತ್ತಿಲ್ಲ ಎಂದು ಆಕ್ಷೇಪಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026