LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆ

ನವದೆಹಲಿ: ಇಂದು ಲೋಕಸಭಾ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಪಹಲ್ಗಾಮ್ ದಾಳಿಗೆ ಕಾರಣರಾಗಿದ್ದ ಮೂವರು ಉಗ್ರರನ್ನು ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಎನ್​ಕೌಂಟರ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ದಿನವೇ ಏಪ್ರಿಲ್ 22ರಂದು ಆಪರೇಷನ್ ಮಹಾದೇವ್ ಅನ್ನು ಪ್ರಾರಂಭಿಸಲಾಯಿತು ಎಂದು ಅಮಿತ್ ಶಾ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಆ ಸಂಜೆ ಶ್ರೀನಗರ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಲಾಯಿತು. ಅಲ್ಲಿ ಭಯೋತ್ಪಾದಕರು ದೇಶ ಬಿಟ್ಟು ಪಲಾಯನ ಮಾಡಲು ಬಿಡಬಾರದು ಎಂದು ನಿರ್ಧರಿಸಲಾಯಿತು. ಅದರಿಂದ ಆರಂಭವಾಗಿದ್ದೇ ಆಪರೇಷನ್ ಮಹಾದೇವ್ ಕಾರ್ಯಾಚರಣೆ ಎಂದು ಅಮಿತ್ ಶಾ ಮಾಹಿತಿ ನೀಡಿದ್ದಾರೆ.

ನಿನ್ನೆ ಎನ್​ಕೌಂಟರ್​​​ನಲ್ಲಿ ಮೃತನಾದ ಸುಲೇಮಾನ್ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ. ಇನ್ನಿಬ್ಬರು ಅಫ್ಘಾನ್ ಮತ್ತು ಜಿಬ್ರಾನ್ ಆತನ ಸಹಚರರಾಗಿದ್ದರು. ಇವರೆಲ್ಲರೂ ಪಾಕ್ ಮೂಲದ ನಿಷೇಧಿತ ಗುಂಪು ಲಷ್ಕರ್-ಎ-ತೈಬಾಗೆ ಸೇರಿದ ಪ್ರಮುಖ ಭಯೋತ್ಪಾದಕರು. ಪಹಲ್ಗಾಮ್ ದಾಳಿಯಲ್ಲಿ ಇವರದ್ದೇ ಕೈವಾಡವಿತ್ತು. 26 ಜನರನ್ನು ಕೊಂದವರನ್ನು ಹತ್ಯೆ ಮಾಡಲಾಗಿದೆ ಎಂದು ಅಮಿತ್ ಶಾ ಸದನಕ್ಕೆ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026