Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಗ್ರಾಮೀಣ ಮಕ್ಕಳಿಗಾಗಿ ವಾರ್ಷಿಕ ಬೇಸಿಗೆ ತರಬೇತಿ ಶಿಬಿರ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: 
ಡೆಬೋರಾ ಫೌಂಡೇಶನ್ ಇಂಡಿಯಾ ವಾರ್ಷಿಕ ಬೇಸಿಗೆ ತರಬೇತಿ ಶಿಬಿರವನ್ನು ಗ್ರಾಮೀಣ ಮಕ್ಕಳಿಗಾಗಿ ನಡೆಸುವ ಶಿಕ್ಷಣ ಮತ್ತು ಚಟುವಟಿಕೆ ಕೇಂದ್ರ (EAC) ಮಕ್ಕಳಿಗಾಗಿ ನಗರದ ನೆಲದಾಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ  ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

  ಕಾರ್ಯಕ್ರಮದಲ್ಲಿ  ಬಾಗವಹಿಸಿದ ಫೌಂಡೇಶನ್‌ಸಂಯೋಜಕ ಥಾಮಸ್ ಲಾರೆನ್ಸ್  ಮಾತನಾಡಿ, 2019 ರಿಂದ ಡೊಡ್ಡಬಳ್ಳಾಪುರ ತಾಲೂಕಿನ 20 ಹಳ್ಳಿಗಳಲ್ಲಿ ಫೌಂಡೇಶನ್ ಮಾಡಿದ ಕೆಲಸಗಳನ್ನು ವಿವರಿಸಿ,

ಆರೋಗ್ಯ ಶಿಬಿರಗಳು, ನಾಯಕರ ಚಟುವಟಿಕೆಗಳು ಮತ್ತು ನಿರುದ್ಯೋಗಿ ಯುವಕರಿಗೆ ಸೀರೆ ಕಟಿಂಗ್, ಬ್ಯೂಟಿಷಿಯನ್, ನೇಕಾರಿಕೆ ಮತ್ತು ಡ್ರೈವಿಂಗ್ ತರಬೇತಿಯಂತಹ ವೃತ್ತಿಪರ ತರಬೇತಿಗಳನ್ನು ಒಳಗೊಂಡ ಕಾರ್ಯಕ್ರಮಗಳನ್ನು ಹಳ್ಳಿಗಳಲ್ಲಿ ಹೆಚ್ಚು ಹೆಚ್ಚು ಮಾಡುತ್ತಾ ಬಂದಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬ್ಲಾಕ್ ಎಜುಕೇಷನ್ ಆಫೀಸರ್ ಸೌ. ಸೈದಾ ಅನಿಸ್ ಮುಜಾವರ್  ಫೌಂಡೇಶನ್‌ನ  ಮಕ್ಕಳ ರಕ್ಷಣೆ ನೀತಿ ದಾಖಲೆ ಮತ್ತು ಪುಸ್ತಕವನ್ನು ಬಿಡುಗಡೆ ಮಾಡಿ, ಫೌಂಡೇಶನ್ ಮಕ್ಕಳ ಸುರಕ್ಷತೆಗಾಗಿ ತೆಗೆದುಕೊಂಡಿರುವ ಕ್ರಮವನ್ನು ಪ್ರಶಂಸಿಸಿ, ವಿದ್ಯಾರ್ಥಿಗಳು ಶಿಕ್ಷಣದ ಅವಕಾಶಗಳನ್ನು ಬಳಸಿಕೊಂಡು ವೈಯಕ್ತಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಉತ್ತೇಜನ ನೀಡಬೇಕೆಂದು ಸಲಹೆ ನೀಡಿದರು.

ಫೌಂಡೇಶನ್‌ನ ವ್ಯವಸ್ಥಾಪಕ ನಿಲಯಾಧಿಕಾರಿ ಥಾಮಸ್ ರಾಜ್ ಕುಮಾರ್ ಮಾತನಾಡಿ, ಮಕ್ಕಳ ರಕ್ಷಣೆ ನೀತಿ ಭಾರತವು ಅಂಗೀಕರಿಸಿದ ಅಂತಾರಾಷ್ಟ್ರೀಯ ಒಪ್ಪಂದಗಳೊಂದಿಗೆ ಹೊಂದಾಣಿಕೆಯಾಗಿರುವುದಾಗಿ ವಿವರಿಸಿದರು ಮತ್ತು ಮಕ್ಕಳ ಹಕ್ಕುಗಳನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯೆಂದು ಎಂದು ಹೇಳಿದರು.

ಈ ಸಂದರ್ಭದಲ್ಲಿ  ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವುಕಾರ್ಯಕ್ರಮದಲ್ಲಿ ಫೌಂಡೇಶನ್ನಿನ ಡಾ.ಪರಮೇಶ್ವರ್, ಸೋಮಶೇಖರ್, ರಾಜಗೋಪಾಲ್ ಇದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ