LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರಿಯಾಂಕ್ ಖರ್ಗೆ ಆಪ್ತನ ವಿರುದ್ಧ ಎಫ್​ಐಆರ್ ದಾಖಲು

ಕಲಬುರಗಿ : ಬೀದರ್​​ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಂಬಂಧ ಬಿಜೆಪಿ ನಾಯಕರು ನೀಡಿದ ದೂರಿನ ಅನ್ವಯ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಮತ್ತು ಗ್ಯಾಂಗ್ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಬಿಜೆಪಿ ನಾಯಕರ ಒತ್ತಡಕ್ಕೆ ಕೊನೆಗೂ ಮಣಿದಿರುವ ಕಲಬುರಗಿ ಸ್ಟೇಷನ್ ಬಜಾರ್ ಠಾಣೆಯ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. ತಮ್ಮ ವಿರುದ್ಧ ಕೊಲೆ ಸಂಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ದೂರು ನೀಡಿದ್ದರು.

ಬಿಜೆಪಿ ನಾಯಕರು ನೀಡಿದ್ದ ದೂರನ್ನು ಪೊಲೀಸರು ಸ್ವೀಕರಿಸುತ್ತಿಲ್ಲ ಎಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ್ದರು. ಪೊಲೀಸರ ಹಾಗೂ ಬಿಜೆಪಿ ನಾಯಕರ ಮಧ್ಯೆ ವಾಕ್ಸಮರ ನಡೆದು, ಸ್ಟೇಷನ್ ಬಜಾರ್ ಠಾಣೆ ಎದುರು ಹೈಡ್ರಾಮವೇ ನಡೆದಿತ್ತು. ಇದೀಗ ರಾಜು ನಂದಕುಮಾರ್, ನಾಗಭುಜಂಗೆ ಸೇರಿದಂತೆ ಆರು ಜನರ ವಿರುದ್ಧ ಬಿಎನ್ಎಸ್ ಸೆಕ್ಷನ್ 351 (2) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಕೋರ್ಟ್ ಗಮನಕ್ಕೆ ತಂದ ಬಳಿಕವೇ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ'- ಲಕ್ಷ್ಮಿ ಹೆಬ್ಬಾಳ್ಕರ್ತೆಂಗಿನ ತೋಟದಲ್ಲಿ ಎಳನೀರು ಮುಟ್ಟಿದ್ದಕ್ಕೆ ಕೊಂದೇ ಬಿಟ್ಟರುಪ್ರಧಾನಿ ಜೊತೆಗೂಡಿ ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ಪ್ರತಿಷ್ಠಿತ ಅಪೋಲೋ ಫಾರ್ಮಸಿಗೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು - ವಿಧಾನಸಭೆಯಲ್ಲಿ ಅನುಮೋದನೆಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆ