ಬೆಂಗಳೂರು:
ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ, ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಯೋಜನೆ ಶಕ್ತಿಗೆ ರಾಜ್ಯದಾದ್ಯಂತ ಸರ್ಕಾರ ಭಾನುವಾರ (ಜೂನ್ 11) ಚಾಲನೆ ನೀಡಲಿದೆ.
ವಿಧಾನಸೌಧದ ಮುಂಭಾಗದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 1.00 ಗಂಟೆಯ ನಂತರ ಎಲ್ಲ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ಸಿಗಲಿದೆ.
ಇದೇ ಸಂದರ್ಭದಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸ್ಥಳೀಯ ಶಾಸಕರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.