ಒಟ್ಟಾವಾ: Canadaದ ನಯಾಗ್ರಾದಲ್ಲಿ Gujarat ಮೂಲದ ವಿದ್ಯಾರ್ಥಿನಿಯೊಬ್ಬಳನ್ನು ದುಷ್ಕರ್ಮಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ. ಮೃತ ಯುವತಿಯನ್ನು ವಿಧಿ ಮೇಘಾ (22) ಎಂದು ಗುರುತಿಸಲಾಗಿದೆ. ಗುಜರಾತ್‌ನ ಆನಂದ ಜಿಲ್ಲೆಯ ಬೊರ್ಸಾದ್ ನಿವಾಸಿಯಾಗಿದ್ದ ವಿಧಿ, ಕಳೆದ ನಾಲ್ಕು ವರ್ಷಗಳಿಂದ ಕೆನಡಾದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದು, ಓದಿನ ಜೊತೆಗೆ ಪಾರ್ಟ್‌ಟೈಮ್ ಉದ್ಯೋಗವೂ ಮಾಡುತ್ತಿದ್ದಳು. ಎಂದಿನಂತೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ದುಷ್ಕರ್ಮಿ ರಸ್ತೆಯಲ್ಲೇ ದಾಳಿ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ವಿಧಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಆಕೆ ಕೊನೆಯುಸಿರೆಳೆದಿದ್ದಾಳೆ. ದರೋಡೆ ಯತ್ನದ ಸಂದರ್ಭ ಈ ಕೃತ್ಯ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದು, ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.