LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಐಎಎಸ್ ಪ್ರತಿಭಾ ಸಿಂಗ್ ಮತ್ತು ಐಪಿಎಸ್ ಆದಿತ್ಯ ಲಂಗೆ ದಂಪತಿ ಸ್ಫೂರ್ತಿದಾಯಕ ಕತೆ

ನವದೆಹಲಿ: ಐಪಿಎಸ್ ಆದಿತ್ಯ ಲಂಗೆ ಮತ್ತು ಐಎಎಸ್ ಪ್ರತಿಭಾ ಸಿಂಗ್ ದಂಪತಿಗಳು ಕರ್ತವ್ಯದ ಮೇಲಿನ ಸಮರ್ಪಣಾ ಭಾವ, ಕಠಿಣ ಪರಿಶ್ರಮ ಮತ್ತು ಬದ್ಧತೆಯಿಂದ ಹೆಸರುವಾಸಿಯಾಗಿದ್ದಾರೆ. ಈ ಜೋಡಿಯು ಅನೇಕ ಯುಪಿಎಸ್‌ಸಿ ಅಭ್ಯರ್ಥಿಗಳಿಗೆ ಮಾದರಿಯಾಗಿದ್ದಾರೆ.

ಐಎಎಸ್ ಪ್ರತಿಭಾ ಸಿಂಗ್: ಶಿಕ್ಷಣ ಮತ್ತು ವೃತ್ತಿಜೀವನ
ಪ್ರತಿಭಾ ಅವರು ಐಐಟಿ ರೂರ್ಕಿಯಿಂದ ಬಿ.ಟೆಕ್ ಪದವಿ ಪಡೆದ ನಂತರ, ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಿಂದ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್‌ನಲ್ಲಿ ಎಂ.ಎಸ್. ಪದವಿ ಪಡೆದಿದ್ದಾರೆ. ಬಳಿಕ 2020ರಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆದು ಉತ್ತೀರ್ಣರಾದ ಪ್ರತಿಭಾ ಸಿಂಗ್ ಅವರು ಐಎಎಸ್ ಅಧಿಕಾರಿಯಾಗುವಲ್ಲಿ ಯಶಸ್ವಿಯಾಗುತ್ತಾರೆ. ಪ್ರಸ್ತುತ ಆಗ್ರಾದಲ್ಲಿ ಮುಖ್ಯ ಅಭಿವೃದ್ಧಿ ಅಧಿಕಾರಿಯಾಗಿ (ಸಿಡಿಒ) ಸೇವೆ ಸಲ್ಲಿಸುತ್ತಿದ್ದಾರೆ.

ಐಪಿಎಸ್ ಆದಿತ್ಯ ಲಂಗೆ: ದಕ್ಷ ಪೊಲೀಸ್ ಅಧಿಕಾರಿ
ಮೂಲತಃ ಜಮ್ಮು ಮತ್ತು ಕಾಶ್ಮೀರದವರಾದ ಆದಿತ್ಯ ಲಂಗೆ ಅವರು, ಎನ್‌ಐಟಿ ಶ್ರೀನಗರದಿಂದ ಇಂಜಿನಿಯರಿಂಗ್ ಪದವಿ ಪಡೆದರು. ತಮ್ಮ ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ 182ನೇ ರ‍್ಯಾಂಕ್ ಪಡೆಯುವ ಮೂಲಕ ಯಶಸ್ವಿಯಾಗಿದ್ದರು. 2016ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಆದಿತ್ಯ ಲಂಗೆ, ಪ್ರಸ್ತುತ ಉತ್ತರ ಪ್ರದೇಶದ ಚಂದೌಲಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್‌ಪಿ) ಕಾರ್ಯನಿರ್ವಹಿಸುತ್ತಿದ್ದಾರೆ.

ತರಬೇತಿ ದಿನಗಳಲ್ಲಿ ಐಎಎಸ್ ಪ್ರತಿಭಾ ಸಿಂಗ್ ಮತ್ತು ಐಪಿಎಸ್ ಆದಿತ್ಯ ಲಂಗೆ ಅವರ ಪರಿಚಯವಾಗುತ್ತದೆ. ಬಳಿಕ ಅವರ ಪರಿಚಯ ಪ್ರೀತಿಯಾಗಿ, ಅದ್ಧೂರಿಯಾಗಿ ವಿವಾಹವಾದರು. ಈ ಜೋಡಿ ಪರಸ್ಪರ ಬೆಂಬಲವಾಗಿ ನಿಂತಿದ್ದಾರೆ. ಇಬ್ಬರೂ ಅಧಿಕಾರಿಗಳು ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿದ್ದು, ತಮ್ಮ ಕೆಲಸಕ್ಕಾಗಿ ಅನೇಕ ಪ್ರಶಂಸೆಗಳನ್ನು ಗಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026