LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರವಾಸೋದ್ಯಮ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಪ್ರವಾಸೋದ್ಯಮ ಇಲಾಖೆ ವತಿಯಿಂದ ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ ತರಬೇತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

12 ತರಗತಿ ಉತ್ತೀರ್ಣರಾದವರಿಗೆ ಸ್ವಾಗತಗಾರರು, 10ನೇ ತರಗತಿ ಉತ್ತೀರ್ಣರಾದವರಿಗೆ ಆಹಾರ ಮತ್ತು ಪಾನೀಯಗಳ ವಿತರಣೆ, 8ನೇ ತರಗತಿ ಉತ್ತೀರ್ಣರಾದವರಿಗೆ ವಿವಿಧ ಆಹಾರ ತಯಾರಿಕೆ ಹಾಗೂ 5ನೇ ತರಗತಿ ಉತ್ತೀರ್ಣರಾದವರಿಗೆ ಕೊಠಡಿ ನಿರ್ವಹಣೆ ತರಬೇತಿ ನೀಡಲಾಗುವದು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐಹೆಚ್‌ಎ(ಇನ್ಸಿ÷್ಟಟ್ಯೂಟ್ ಆಫ್ ಹೋಟೆಲ್ ಮ್ಯಾನೇಜಮೆಂಟ್) ಮತ್ತು ಎಫ್.ಸಿ.ಐ (ಫುಡ್ ಕ್ರಾಫ್ಟ್ ಇನ್ಸಿ÷್ಟಟ್ಯೂಟ್) ಮೂಲಕ ಬೆಂಗಳೂರು ಹಾಗೂ ಮೈಸೂರಿನಲ್ಲಿ ತರಬೇತಿ ನೀಡಲಾಗುವುದು.

ಅರ್ಜಿಸಲ್ಲಿಸುವ ಅಭ್ಯರ್ಥಿಗಳು 20 ರಿಂದ 45 ವರ್ಷದೊಳಗಿರಬೇಕು. ತರಬೇತಿ ವೇಳೆ ಊಟ, ವಸತಿ ಹಾಗೂ ಪ್ರೋತ್ಸಾಹಧನ ನೀಡಲಾಗುವುದು. ಮೊದಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಸೇವಾ ಸಿಂದೂ ಪೋರ್ಟಲ್  sevasindhu.karnataka.gov.in ಹಾಗೂ ಬಾಪೂಜಿ ಸೇವಾ ಕೇಂದ್ರ  bsk.karnataka.gov.in    ಟಿ ಮೂಲಕ ಪ್ರವಾಸೋದ್ಯಮ ವೆಬ್‌ಸೆಟ್  karnatakatourism.org      ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿ ದೂರವಾಣಿ ಸಂಖ್ಯೆ 08194-234466, ಮೊಬೈಲ್ ಸಂಖ್ಯೆ 8660556443, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರ ಮೊಬೈಲ್ ಸಂಖ್ಯೆ 9901948850 ಕರೆ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026