LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕನ್ನಡದ ಹಿರಿಯ ನಟ ಅನಂತನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ

ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್‌ ಅವರಿಗೆ ದೇಶದ ತೃತೀಯ ನಾಗರಿಕ ಅತ್ಯುನ್ನತ ಪದ್ಮಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರದಾನ ಮಾಡಿದ್ದಾರೆ.



ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ನಟ ಅನಂತನಾಗ್‌ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಸಿನಿ ಜಗತ್ತಿನ ಕಲಾ ಕ್ಷೇತ್ರದಲ್ಲಿ ಅನಂತನಾಗ್‌ ಅವರ ಮಹಾನ್ ಸಾಧನೆಗೆ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

ಅನಂತನಾಗ್ ಅವರು 1948ರ ಸೆ.4ರಂದು ಉತ್ತರ ಕನ್ನಡದ ಶಿರಳ್ಳಿ ಗ್ರಾಮದಲ್ಲಿ ಜನಿಸಿದರು. 1973ರ ಸಂಕಲ್ಪ ಸಿನಿಮಾದಿಂದ ಕನ್ನಡ  ಚಿತ್ರರಂಗದ ಬೆಳ್ಳಿ ತೆರೆಗೆ ಪ್ರವೇಶಿಸಿದರು. ಕನ್ನಡದ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರ ‘ನಾ ನಿನ್ನ ಬಿಡಲಾರೆ’, ‘ಬಯಲುದಾರಿ’, ‘ಅಂಕುರ್’ ಮೂವಿ ಸೇರಿದಂತೆ ಹಲವು ಚಿತ್ರಗಳಲ್ಲಿ ಅನಂತ್ ನಾಗ್ ಅವರು ಅಭಿನಯ ಮಾಡಿ ಯಶಸ್ಸು ಕಂಡುಕೊಂಡರು.

ಬಯಲು ದಾರಿ (1976), ಕನ್ನೇಶ್ವರ ರಾಮ (1977), ಚಂದನದ ಗೊಂಬೆ (1979), ಬೆಂಕಿಯ ಬಾಲೆ (1983), ಹೆಂಡ್ತಿಗೆ ಹೇಳಬೇಡಿ (1989), ಗಣೇಶನ 09 ಮದುವೆ, ಗಂಡು (2006), ಗೋಧಿ ಬಣ್ಣ ಸಾಧಾರಣ ಮೈಕಟ್ಟು (2016), ರಾಜಕುಮಾರ (2017), ಸರ್ಕಾರಿ ಹಿ. ಪ್ರಾ. ಶಾಲೆ, ಕಾಸರಗೋಡು, ಕೆಜಿಎಫ್: ಅಧ್ಯಾಯ 1 (2018), ಕೆಜಿಎಫ್: ಅಧ್ಯಾಯ 2 (2022) ಹಾಗೂ ಗಾಳಿಪಟ 2 (2022) ಸಿನಿಮಾ ಸೇರಿದಂತೆ ಇನ್ನು ಹಲವಾರು ಸಿನಿಮಾಗಳಲ್ಲಿ ಅನಂತನಾಗ್ ಅವರ ಅಭಿನಯಿಸಿದ್ದರು.

2025ರ ಜನವರಿ 25 ರಂದು ಪದ್ಮಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದ ಕೇಂದ್ರ ಸರ್ಕಾರ 7 ಪದ್ಮವಿಭೂಷಣ ಪ್ರಶಸ್ತಿಗಳನ್ನು ಘೋಷಣೆ ಮಾಡಿತ್ತು. ಇದರ ಜೊತೆಗೆ 19 ಪದ್ಮಭೂಷಣ, 113 ಪದ್ಮಶ್ರೀ ಪ್ರಶಸ್ತಿಗಳನ್ನು ಅನೌನ್ಸ್ ಮಾಡಿತ್ತು. ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದವರನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು. ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನಂತನಾಗ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026