LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಂಗಾವತಿ ರೈಲು ನಿಲ್ದಾಣಕ್ಕೆ ಅಂಜನಾದ್ರಿ ಹೆಸರು: ಎಂ ಬಿ ಪಾಟೀಲ

ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ, ಮುನಿರಾಬಾದ್ ಮತ್ತು ಬಾನಾಪುರ ರೈಲ್ವೆ ನಿಲ್ದಾಣಗಳಿಗೆ ಕ್ರಮವಾಗಿ ಅಂಜನಾದ್ರಿ (ಕಿಷ್ಕಿಂಧಾ), ಹುಲಿಗೆಮ್ಮ ದೇವಿ ಮತ್ತು ಮಹಾತ್ಮ ಗಾಂಧಿ ರೈಲು‌ ನಿಲ್ದಾಣ ಎಂದು ಮರುನಾಮಕರಣ ಮಾಡಬೇಕೆಂದು ಶಿಫಾರಸು ಮಾಡಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಭಾನುವಾರ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ಈ ಶಿಫಾರಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳಿಸಲಾಗಿದೆ. ಅವರ ಮೂಲಕ ಇದನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳಿಸಿ ಕೊಡಲಾಗುವುದು ಎಂದಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರುವ ಈ ಮೂರು ನಿಲ್ದಾಣಗಳಿಗೆ ಮರುನಾಮಕರಣ ಮಾಡುವುದರ ಹಿಂದೆ ಜನರ ಭಾವನೆಗಳಿಗೆ ಮನ್ನಣೆ ನೀಡಿದಂತೆ ಆಗುತ್ತದೆ. ಅಂಜನಾದ್ರಿಯು ರಾಮಾಯಣದಲ್ಲಿ ಬರುವ ಆಂಜನೇಯನ ಜನ್ಮಸ್ಥಳವಾಗಿದ್ದು, ಹುಲಿಗೆಮ್ಮದೇವಿ ಈ ಭಾಗದ ಜನಪ್ರಿಯ ಜನಪದ ದೇವತೆಯಾಗಿದೆ. ಮಹಾತ್ಮ ಗಾಂಧಿ ಅವರ ಹೆಸರಿಡುವುದರ ಹಿಂದೆ ಕೂಡ ಐತಿಹಾಸಿಕ ಕಾರಣವಿದೆ ಎಂದು ಅವರು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರತಿಯೊಬ್ಬರೂ ವೈಚಾರಿಕ, ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯವಿಶ್ವ ಕರ್ಮ ಸಮಾಜದ ಮಹಿಳಾ ವಿಭಾಗದಿಂದ ಮಹಿಳಾ ದಿನಾಚಾರಣೆಕಿಸ್ನಾ ವಜ್ರ ಮತ್ತು ಚಿನ್ನದ ಆಭರಣಗಳ ಸಂಸ್ಥೆಯಿಂದ ಮಹಿಳಾ ದಿನಾಚರಣೆಸೈಬರ್ ಥ್ರಿಲ್ಲರ್ ಅಂಶಗಳ ಒಳಗೊಂಡ ಅಚ್ಯುತ ಅವತಾರಂಮೋದಿ ‘ವಂದೇ ಮಾತರಂ’ಗೆ ನೀಡಿದ ಗೌರವ ವಿರೋಧಿಸಲು ಕಾಂಗ್ರೆಸ್ ಅಧಃಪತನದ ಹಾದಿಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆಭಾರತಿ ಟೀಚರ್ 7ನೇ ತರಗತಿಗೆ @ 50ರ ಸಂಭ್ರಮಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳು