Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Koppal

ಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿ

ಕೊಪ್ಪಳ :ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಿಷ್ಕಿಂಧೆ ಅಂಜನಾದ್ರಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆಡಳಿತಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಿಂದ ಯಾವುದೇ ಹೊಸ ಅಥವಾ ಮಹತ್ವದ ಆದೇಶಗಳು ಹೊರಬಿದ್ದಿಲ್ಲ ಎಂದು ‘ಕಿಷ್ಕಿಂಧೆ ಅಂಜನಾದ್ರಿ ಪರ್ವತ ಲಾರ್ಡ್ ಹನುಮಾನ್ ಟೆಂಪಲ್ ವಿಕಾಸ ಟ್ರಸ್ಟ್’ ಸ್ಪಷ್ಟಪಡಿಸಿದೆ ಎಂದು ನ್ಯಾಯವಾದಿ ವಿನಯ್ ಸಿಂಗ್ ತಿಳಿಸಿದ್ದಾರೆ.
ಅವರು ಗುರುವಾರ ನಗರದ ಪತ್ರಿಕಾ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ, ಟ್ರಸ್ಟ್ ಹಾಗೂ ಮಹಾಂತ ವಿದ್ಯಾಸಾಸ ಬಾಬಾಜಿ ಅವರು ಸಲ್ಲಿಸಿದ್ದ ರಿಟ್ ಅರ್ಜಿ ಸಂಖ್ಯೆ 105448/2019 ಹಾಗೂ ರಿಟ್ ಅರ್ಜಿ ಸಂಖ್ಯೆ 111440/2019ಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ಯಾವುದೇ ಹೊಸ ತೀರ್ಪು ಬಂದಿಲ್ಲ ಎಂದರು. 2018ರ ಅಧಿಸೂಚನೆ ರದ್ದು, ದೇವಸ್ಥಾನದ ಆಡಳಿತ ಮತ್ತು ಕಾರ್ಯನಿರ್ವಾಹಕ ಅಧಿಕಾರಿ (ಇಒ) ನೇಮಕಾತಿ ವಿಚಾರವಾಗಿ ನ್ಯಾಯಾಲಯ ಯಾವುದೇ ಅಂತಿಮ ತೀರ್ಪು ನೀಡಿಲ್ಲ. ನ್ಯಾಯಾಲಯವು ವಿಚಾರಣೆಯನ್ನು ಕೇವಲ ಮುಂದೂಡಿದೆಯೇ ಹೊರತು, ದೇವಸ್ಥಾನದ ಆಡಳಿತ ಅಥವಾ ಅರ್ಜಿದಾರರ ಹಕ್ಕಿಗೆ ಸಂಬಂಧಿಸಿದಂತೆ ಯಾವುದೇ ಹೊಸ ಆದೇಶಗಳನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ಅಕ್ಟೋಬರ್ 28ರಂದು ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಏಕಾಏಕಿ ದೇವಸ್ಥಾನಕ್ಕೆ ಬಂದು ನಡೆಸಿದ ಕಾರ್ಯಾಚರಣೆಯ ಬಗ್ಗೆ ಟ್ರಸ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪೂಜಾ ಕೈಂಕರ್ಯಗಳು ಮುಗಿಯುವ ಮುನ್ನವೇ ಭಕ್ತರನ್ನು ಹೊರಹಾಕಿ, ಬ್ಯಾನರ್‌ಗಳನ್ನು ತೆರವುಗೊಳಿಸಿ, ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಫಲಕಗಳನ್ನು ಅಳವಡಿಸಿರುವುದು ಯಾವ ಕಾನೂನಿನ ಅಡಿಯಲ್ಲಿ ಎಂದು ಟ್ರಸ್ಟ್ ಪ್ರಶ್ನಿಸಿದೆ. ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ತಮ್ಮಿಷ್ಟದಂತೆ ವ್ಯಾಖ್ಯಾನಿಸಿ ಕಾನೂನುಬಾಹಿರವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ಮುಂದುವರೆದು ಮಾತನಾಡಿದ ಅವರು, ದೇವಸ್ಥಾನದ ನಿರ್ವಹಣೆ ಅಥವಾ ಪೂಜಾ ವಿಧಿವಿಧಾನಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಬಳಿ ಹೊಸ ನ್ಯಾಯಾಲಯದ ಆದೇಶವಿದ್ದರೆ, ಅದರ ಅಧಿಕೃತ ಪ್ರತಿಯನ್ನು ನೀಡಬೇಕು ಎಂದು ಟ್ರಸ್ಟ್ ಮನವಿ ಮಾಡಿದೆ. ಅಂಜನಾದ್ರಿಯ ಪರಂಪರೆ, ಭಕ್ತರ ಸೇವೆ ಮತ್ತು ಕಾನೂನುಬದ್ಧ ಆಡಳಿತದ ಹಕ್ಕುಗಳ ರಕ್ಷಣೆಗಾಗಿ ಮಹಾಂತ ವಿದ್ಯಾಸಾಸ ಬಾಬಾಜಿ ಹಾಗೂ ಟ್ರಸ್ಟ್ ಕಾನೂನುಬದ್ಧ ಹೋರಾಟವನ್ನು ಮುಂದುವರಿಸಲಿದೆ ಎಂದು ತಿಳಿಸಿದರು. ಇದೇ ವೇಳೆ, ಸ್ಥಳೀಯ ಯುವಕರು, ಭಕ್ತರು ಹಾಗೂ ಸ್ವಯಂಸೇವಕರು ಯಾವುದೇ ಸಂಘರ್ಷಕ್ಕೆ ಇಳಿಯದೆ ಕಾನೂನಿಗೆ ಗೌರವ ನೀಡಿ ಸಹಕರಿಸಬೇಕು ಎಂದು ಟ್ರಸ್ಟ್ ವಿನಂತಿಸಿದೆ ಎಂದು ನ್ಯಾಯವಾದಿ ವಿನಯಸಿಂಗ್ ಹೇಳಿದರು.
ಈ ಸಂದರ್ಭದಲ್ಲಿ ವೆಂಕಟೇಶ್ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ