ಅಥಣಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಅಥಣಿ ಶಾಖೆ ವತಿಯಿಂದ ಬರುವ ಶನಿವಾರ ದಿ. ೩೧ ರಂದು ಮಧ್ಯಾಹ್ನ ೧೨ ಗಂಟೆಗೆ ಕೃಷ್ಣಾ ರೈತ ಭವನದಲ್ಲಿ ತಾಲೂಕಾ ಮಟ್ಟದ ಸರ್ಕಾರಿ ನೌಕರರ ಕೌಶಲ್ಯಾಧಾರಿತ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರ ಸನ್ಮಾನ ಹಾಗೂ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಜರುಗಲಿದೆ ಎಂದು ತಾಲೂಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಮಗೊಂಡ ಪಾಟೀಲ ಹೇಳಿದರು.
ಅವರು ಪಟ್ಟಣದಲ್ಲಿ ರವಿವಾರ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಕಾರ್ಯಕ್ರಮದ ಉದ್ಘಾಟಕರಾಗಿ ಸಹಕಾರ ಸಚಿವ ಲಕ್ಷ್ಮಣ ಸವದಿ, ಮುಖ್ಯ ಅತಿಥಿಗಳಾಗಿ ಕಾಗವಾಡ ಮತ ಕ್ಷೇತ್ರದ ಶಾಸಕ ರಾಜು ಕಾಗೆ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಕ್ಷರಿ ಆಗಮಿಸಲಿದ್ದಾರೆ. ಸಮಾರಂಭದ ತಹಸಿಲ್ದಾರ ಸಿದರಾಯ ಬೋಸಗಿ, ತಾ. ಪಂ ಅಧಿಕಾರಿ ಶಿವಾನಂದ ಕಲ್ಲಾಪುರ, ಡಿವೈಎಸ್ಪಿ ಪಿ. ವೀರೇಂದ್ರ ಕುಮಾರ ಸೇರಿದಂತೆ ತಾಲೂಕ ಮಟ್ಟದ ಅಧಿಕಾರಿಗಳು ಮತ್ತು ಸರ್ಕಾರಿ ನೌಕರ ಸಂಘದ ಎಲ್ಲಾ ಪದಾಧಿಕಾರಿಗಳು, ಸರ್ಕಾರಿ ನೌಕರರ ವಿವಿಧ ದೇಶಗಳ ಸಹಕಾರಿ ಸಂಘದ ನಿರ್ದೇಶಕರು ಮತ್ತು ತಾಲೂಕ ಮಟ್ಟದ ಸರ್ಕಾರಿ ನೌಕರರು ಭಾಗವಹಿಸಲಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಸುರೇಶ ಮಜ್ಜಗಿ, ಈರಪ್ಪ ನಿಂಗವ್ವಗೊಳ, ರವಿ ಅಂಗಡಿ, ಪರಶುರಾಮ ಸನದಿ, ಮಲ್ಲಪ್ಪ ಅಸ್ಕಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.