Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News | Districts Chitradurga

ಸಿಂಗಾಪುರ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಸಿಂಗಾಪುರ: ಸಿಂಗಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025–26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸಿಂಗಾಪುರnews_1790218523_0_712.webp

 

news_1790218524_1_694.webp

 

news_1790218524_2_803.webp

 

ಗ್ರಾಮದ ಸಂಘದ ಆವರಣದಲ್ಲಿ ನಡೆಯಿತು.

ಪ್ರಾರ್ಥನೆಯೊಂದಿಗೆ ಸಭೆ ಆರಂಭಗೊಂಡಿತು. ಬಳಿಕ ಸಂಘದ 2025–26ನೇ ಸಾಲಿನ ಲೆಕ್ಕಪತ್ರಗಳನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಕೆ.ಆರ್. ಅವರು ಸಭೆಯ ಮುಂದೆ ಮಂಡಿಸಿ ಓದಿ ವಿವರಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ಜೆ.ವಿ. ಗಂಗಾಧರಪ್ಪ ಅವರು, ಸಂಘದಲ್ಲಿ ಎರಡು ಸಾವಿರಕ್ಕೂ ಅಧಿಕ ಸದಸ್ಯರಿದ್ದು, ವಾರ್ಷಿಕ ಮಹಾಸಭೆಗೆ ಸದಸ್ಯರ ಹಾಜರಾತಿ ಕಡಿಮೆಯಾಗುತ್ತಿರುವುದು ಗಮನಾರ್ಹ ಸಂಗತಿಯಾಗಿದೆ. ಎಲ್ಲಾ ಸದಸ್ಯರು ಮಹಾಸಭೆಗಳಲ್ಲಿ ಕಡ್ಡಾಯವಾಗಿ ಭಾಗವಹಿಸಿ ಸಂಘದ ಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಸಂಘದಲ್ಲಿ ಸುಸ್ತಿ ಸಾಲದ ಪ್ರಮಾಣ ಹೆಚ್ಚಾಗಿದ್ದು, ಸದಸ್ಯರು ಪಡೆದ ಸಾಲವನ್ನು ನಿಗದಿತ ಅವಧಿಯಲ್ಲಿ ಪಾವತಿಸುವ ಮೂಲಕ ಸಂಘದ ಆರ್ಥಿಕ ಚಟುವಟಿಕೆಗಳಿಗೆ ಸಹಕರಿಸಬೇಕು. ಸಾಲ ಮರುಪಾವತಿ ಸರಿಯಾದ ಸಮಯಕ್ಕೆ ನಡೆದರೆ ಅರ್ಹ ಸದಸ್ಯರಿಗೆ ಹೊಸ ಸಾಲಗಳನ್ನು ನೀಡಲು ಸಂಘಕ್ಕೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

ಅದೇ ರೀತಿ ಸದಸ್ಯರು ಸಂಘದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಠೇವಣಿ ಇಡುವುದರ ಜೊತೆಗೆ ಸಂಘದ ವಿವಿಧ ವ್ಯವಹಾರಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅಧ್ಯಕ್ಷರು ಕರೆ ನೀಡಿದರು. ಸಂಘದ ಶೇರು ಬಂಡವಾಳ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಸದಸ್ಯರು ಹೆಚ್ಚಿನ ಪ್ರಮಾಣದಲ್ಲಿ ಶೇರು ಪಡೆಯುವ ಮೂಲಕ ಸಂಘವನ್ನು ಮತ್ತಷ್ಟು ಬಲಪಡಿಸಬೇಕು ಎಂಬ ಪ್ರಸ್ತಾಪವೂ ಸಭೆಯಲ್ಲಿ ವ್ಯಕ್ತವಾಯಿತು.

ಸಂಘದ ಮಾಜಿ ಅಧ್ಯಕ್ಷ ಕೆ.ಎಂ. ನಾಗರಾಜು ಮಾತನಾಡಿ, ಸದಸ್ಯರು ತಮ್ಮ ಸುಸ್ತಿ ಸಾಲವನ್ನು ಪಾವತಿಸಿದಲ್ಲಿ ಅಸಲು ಮತ್ತು ಬಡ್ಡಿ ಮೊತ್ತವನ್ನು ಸೇರಿಸಿ ಸಾಲವನ್ನು ನವೀಕರಿಸಿಕೊಡುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿಯ ನಿರ್ದೇಶಕರು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಮೇಲ್ವಿಚಾರಕರು ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸಭೆಯ ಮೂಲಕ ಸದಸ್ಯರು ಸಂಘದ ಆರ್ಥಿಕ ಶಿಸ್ತು, ಸಾಲ ಮರುಪಾವತಿ ಹಾಗೂ ಸಂಘದ ವ್ಯವಹಾರಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಾಲ್ಗೊಳ್ಳುವ ಕುರಿತು ಚರ್ಚೆ ನಡೆಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST