Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮದ್ಯಪಾನಿಗಳಿಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಮೇ 11ರಿಂದ ಹೊಸ ಟ್ಯಾಕ್ಸ್

ಬೆಂಗಳೂರು: ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದು, “ಆಲ್ಕೋಹಾಲ್ ಇನ್ ಬೇವರೇಜ್” (AIB) ಆಧಾರಿತ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತರಲು ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಹೊಸ ನೀತಿ ಮೇ 11ರಿಂದ ರಾಜ್ಯಾದ್ಯಂತ ಜಾರಿಗೆ ಬರಲಿದೆ.

ಈ ಮೂಲಕ ಹಲವು ದಶಕಗಳಿಂದ ಜಾರಿಯಲ್ಲಿದ್ದ “ಬಲ್ಕ್ ಲೀಟರ್” ಆಧಾರಿತ ತೆರಿಗೆ ಪದ್ಧತಿಗೆ ಅಂತ್ಯ ಹಾಡಲಾಗುತ್ತಿದೆ. AIB ಆಧಾರಿತ ತೆರಿಗೆ ನೀತಿಯನ್ನು ಅನುಷ್ಠಾನಗೊಳಿಸುವ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗುತ್ತಿದೆ.

ಸರ್ಕಾರವು ಏಪ್ರಿಲ್ 18ರಂದು ಕರಡು ಅಧಿಸೂಚನೆ ಪ್ರಕಟಿಸಿ ಸಾರ್ವಜನಿಕರಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಆಹ್ವಾನಿಸಿತ್ತು. ಬಂದ ಅಭಿಪ್ರಾಯಗಳನ್ನು ಪರಿಶೀಲಿಸಿದ ಬಳಿಕ ಕರ್ನಾಟಕ ಅಬಕಾರಿ (ಅಬಕಾರಿ ಸುಂಕ ಮತ್ತು ಶುಲ್ಕ) (2ನೇ ತಿದ್ದುಪಡಿ) ನಿಯಮಗಳು, 2026 ಅನ್ನು ಅಂತಿಮಗೊಳಿಸಲಾಗಿದೆ.

ಹೊಸ ನಿಯಮಾವಳಿಯಂತೆ ಬ್ರಾಂಡಿ, ವಿಸ್ಕಿ, ರಮ್, ಜಿನ್, ಬಿಯರ್ ಹಾಗೂ ವೈನ್ ಸೇರಿದಂತೆ ವಿವಿಧ ಮದ್ಯಗಳಲ್ಲಿ ಇರುವ “ಆಲ್ಕೋಹಾಲ್ ಪ್ರಮಾಣ” ಆಧರಿಸಿ ತೆರಿಗೆ ವಿಧಿಸಲಾಗುತ್ತದೆ. ಇದರಿಂದ ಪ್ರಸ್ತುತ ಜಾರಿಯಲ್ಲಿರುವ 16 ಅಬಕಾರಿ ಸ್ಲ್ಯಾಬ್‌ಗಳನ್ನು ಇಳಿಸಿ ಕೇವಲ 8 ಸ್ಲ್ಯಾಬ್‌ಗಳಿಗೆ ಮಿತಿಗೊಳಿಸಲಾಗಿದೆ.

ಅಬಕಾರಿ ಇಲಾಖೆಯ ಆದಾಯದಲ್ಲಿ ಪ್ರಮುಖ ಪಾತ್ರವಹಿಸುವ ಕಡಿಮೆ ದರದ ಮದ್ಯ ವಿಭಾಗದ ಮೇಲೆ ಈ ನೀತಿಯ ಪರಿಣಾಮ ಹೆಚ್ಚು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಉದ್ಯಮ ವಲಯ ಅಂದಾಜಿಸಿದೆ. ವಿಶೇಷವಾಗಿ ಹೆಚ್ಚು ಮಾರಾಟವಾಗುವ 180 ಮಿಲಿ ಟೆಟ್ರಾ ಪ್ಯಾಕ್‌ಗಳ ವಿಸ್ಕಿ, ರಮ್, ಬ್ರಾಂಡಿ, ಜಿನ್ ಹಾಗೂ ವೋಡ್ಕಾ ಬೆಲೆ ಕನಿಷ್ಠ 20%ರವರೆಗೆ ಏರಿಕೆಯಾಗಬಹುದು ಎಂದು ಹೇಳಲಾಗುತ್ತಿದೆ.

ಇದೇ ವೇಳೆ ಪ್ರೀಮಿಯಂ ಮದ್ಯ ಬ್ರ್ಯಾಂಡ್‌ಗಳ ದರಗಳು ಶೇ.16ರಿಂದ ಶೇ.20ರವರೆಗೆ ಇಳಿಕೆಯಾಗುವ ಸಾಧ್ಯತೆ ಇದೆ. ಇದರಿಂದ ಬಹುರಾಷ್ಟ್ರೀಯ ಪ್ರೀಮಿಯಂ ಬ್ರ್ಯಾಂಡ್‌ಗಳಿಗೆ ಲಾಭವಾಗುವ ಸಾಧ್ಯತೆ ಇದ್ದರೂ, ಸ್ಥಳೀಯ ಡಿಸ್ಟಿಲರಿಗಳು ಮತ್ತು ಪ್ರಾದೇಶಿಕ ಉತ್ಪಾದಕರಿಗೆ ಹಿನ್ನಡೆ ಉಂಟಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ.

ಕಡಿಮೆ ಬೆಲೆಯ ಭಾರತೀಯ ಮದ್ಯ ಉತ್ಪಾದಕರಿಗೆ ಈ ಹೊಸ ತೆರಿಗೆ ವ್ಯವಸ್ಥೆ ಹೆಚ್ಚುವರಿ ಹೊರೆ ತರಬಹುದಾಗಿದೆ. ಸ್ಥಳೀಯ ಹೂಡಿಕೆ ಹಾಗೂ ಉದ್ಯೋಗಾವಕಾಶಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದೆಡೆ, ಇಂಡಿಯನ್ ಸ್ಪಿರಿಟ್ಸ್ ಆ್ಯಂಡ್ ವೈನ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (ISWAI) ಈ ಹೊಸ ನೀತಿಯನ್ನು ಸ್ವಾಗತಿಸಿದೆ.

ಸಂಸ್ಥೆಯ ಸಿಇಒ ಸಂಜಿತ್ ಪಾಧಿ ಪ್ರತಿಕ್ರಿಯಿಸಿ, ಇದು ಅಬಕಾರಿ ವ್ಯವಸ್ಥೆಯನ್ನು ಆಧುನೀಕರಿಸುವ ಹಾಗೂ ಸರಳಗೊಳಿಸುವ ದೂರದೃಷ್ಟಿಯ ಹೆಜ್ಜೆಯಾಗಿದೆ. ಈ ಮೂಲಕ ಪ್ರೀಮಿಯಂ ಉತ್ಪನ್ನಗಳ ಬೆಳವಣಿಗೆಗೆ ಉತ್ತೇಜನ ಸಿಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“Drink Better, Not More” ಎಂಬ ತತ್ವಕ್ಕೆ ಈ ನೀತಿ ಹೊಂದಿಕೆಯಾಗಿದ್ದು, ಗುಣಮಟ್ಟದ ಮದ್ಯ ಸೇವನೆಯನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ