
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಮೂವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ.
ಬಾಗಲಕೋಟೆ ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ, ಕಮತಗಿ ಪಟ್ಟಣ ಪಂಚಾಯಿತಿ ಸದಸ್ಯರಾದ ಗುರು ಪಾಟಿಲ, ರಮೇಶ ಜಮಖಂಡಿ ಅವರನ್ನು ಅಮಾನತು ಮಾಡಲಾಗಿದೆ.
ಉಪ ಚುನಾವಣೆಯಲ್ಲಿ ಇವರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಬಗ್ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನೀಡಿದ ದೂರಿನ ಮೇರೆಗೆ ಮೂವರಿಗೆ ನೋಟಿಸ್ ನೀಡಲಾಗಿದ್ದು, ಅವರ ಉತ್ತರ ಆಧರಿಸಿ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯಮಠ ಮಾಹಿತಿ ನೀಡಿದ್ದಾರೆ.