LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಲ್ಪಸಂಖ್ಯಾತರ ಅಭ್ಯರ್ಥಿಗಳಿಂದ ಪದವಿ/ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ:  ಅಲ್ಪಸಂಖ್ಯಾತರ ನಿರ್ದೇಶನಾಲಯ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪರಸ್ಪರ ಒಡಂಬಡಿಕೆಯೊಂದಿಗೆ ಶಾಲಾ/ಕಾಲೇಜಿನಿಂದ ಹೊರಗುಳಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ  ದೂರ ಶಿಕ್ಷಣ ಮಾದರಿಯಲ್ಲಿ ಪದವಿ/ಸ್ನಾತಕೋತ್ತರ ಪದವಿಯ ಉನ್ನತ ಶಿಕ್ಷಣವನ್ನು ಹಾಗೂ ವಿವಿಧ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ಶಿಕ್ಷಣವನ್ನು ನೀಡುವ ಯೋಜನೆ ಹೊಂದಿದ್ದು ಅರ್ಹ ವಿದ್ಯಾರ್ಥಿಗಳು  ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಆಸಕ್ತ ವಿಧ್ಯಾರ್ಥಿಗಳು  https://dom.karnataka.gov.in ಅಥವಾ https://minority.ksouportal.com ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಆಗಸ್ಟ್ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಪ್ರವೇಶಾತಿಗಾಗಿಯೇ ಬೆಂಗಳೂರಿನ ಹಜ್ ಭವನದಲ್ಲಿ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನೀಡುವ ಆಫೈನ್/ದೂರ ಶಿಕ್ಷಣ ಕ್ರಮದ ಪದವಿ ಕೋರ್ಸ್ಗಳು (ಬಿ.ಎ, ಬಿ.ಕಾಂ. ಬಿ.ಎಸ್ಸಿ ಸೇರಿದಂತೆ ಒಟ್ಟು 09 ಕೋರ್ಸ್ಗಳು) (ಎಂ.ಎ, ಎಂ.ಕಾಂ. ಎಂ.ಎಸ್ಸಿ, ಎಂ.ಬಿ.ಎ ಸೇರಿದಂತೆ ಒಟ್ಟು 34 ಕೋರ್ಸ್ಗಳು), ಪದವಿ ಸರ್ಟಿಫಿಕೇಟ್ ಕೋರ್ಸ್ಗಳು (04 ಕೋರ್ಸ್ಗಳು), ಸ್ನಾತಕೋತ್ತರ ಪದವಿ ಸರ್ಟಿಫಿಕೇಟ್ ಕೋರ್ಸ್ಗಳು (13 ಕೋರ್ಸ್ಗಳು) ಮತ್ತು ಡಿಪ್ಲೋಮಾ ಕೋರ್ಸ್ಗಳನ್ನು (07 ಕೋರ್ಸ್ಗಳು) ಒಳಗೊಂಡಂತೆ ಒಟ್ಟು 69 ಕೋರ್ಸ್ ಗಳಿಗೆ ಶಿಕ್ಷಣವನ್ನು ನೀಡಲಾಗುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಹಜ್ ಭವನದ ಅಧಿಕಾರಿಗಳನ್ನು/ ಹಜ್ ಭವನದಲ್ಲಿರುವ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರದ ನಿರ್ದೇಶಕರನ್ನು/ಪ್ರಾದೇಶಿಕ ಹಜ್ ಭವನವನ್ನು ಅಥವಾ ಪ್ರವೇಶಾತಿ ವಿಭಾಗ ಮೊಬೈಲ್ ಸಂಖ್ಯೆ: 9900667916/9945366062/9113512565/96113512565/9611418726/9900506659/9035395137/8123469017/9844010407/8277799990 ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026