ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಬೆಂ.ಗ್ರಾ.ಜಿಲ್ಲೆ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ನಡೆದ ಮೆಟ್ರಿಕ್ ನಂತರದ ಕೋರ್ಸ್ ಗಳ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆಯ ವೆಬ್ಸೈಟ್ ಆದ www.twd.karnataka.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಜೂನ್ 13 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಪಿ.ಯು.ಸಿ/ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸತಕ್ಕದ್ದು.
ಅರ್ಜಿ ಸಲ್ಲಿಸಲು ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಜಾತಿ ಆದಾಯ ಪ್ರಮಾಣಪತ್ರ, ಆಧಾರ್ ಕಾರ್ಡ್, ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣಪತ್ರ/ಅಂಕಪಟ್ಟಿ ಹೊಂದಿರಬೇಕು. ಚಾಲ್ತಿಯಲ್ಲಿರುವ ಮತ್ತು ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ವಿವರ. ಪಾಸ್ ಪೋರ್ಟ್ ಅಳತೆಯ ಭಾವಚಿತ್ರ.
ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡಿದ ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸಿ ನಂತರ ಸಲ್ಲಿಸಿದ ಅರ್ಜಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಇರುವ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 217, 2ನೇ ಮಹಡಿ, ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ದೃಢೀಕೃತ ದಾಖಲೆಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29787448 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.