LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನ

 

ಬೆಂ.ಗ್ರಾ.ಜಿಲ್ಲೆ:  ವಿಕಲಚೇತನರ ಹಾಗೂ ಹಿರಿಯರ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಸ್ಥಳೀಯ ಸಮರ್ಥ ವಿಕಲಚೇತನರನ್ನು ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ನಗರಸಭೆಗೆ ನಗರ ಪುನರ್ವಸತಿ ಕಾರ್ಯಕರ್ತರನ್ನಾಗಿ ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನೆಲಮಂಗಲದ ದೊಡ್ಡಬೆಲೆ ಮತ್ತು ಸೋಲದೇವನಹಳ್ಳಿ ಗ್ರಾಮ ಪಂಚಾಯಿತಿಗಳು,ಹೊಸಕೋಟೆ ಟೌನ್ ನಗರಸಭೆ-1 ಹುದ್ದೆ, ದೇವನಹಳ್ಳಿಯ ಅವತಿ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಶೇಕಡಾ 40 ಹಾಗೂ ಅದಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರಬೇಕು (ಯು.ಡಿ.ಐ.ಡಿ ಲಗತ್ತಿಸಬೇಕು. ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರದವರಿಗೆ ಆದ್ಯತೆ. ಎಸ್.ಎಸ್.ಎಲ್.ಸಿ.ಯಲ್ಲಿ ಉತ್ತೀರ್ಣರಾದವರು ಸಿಗದೆ ಇದ್ದ ಸಂದರ್ಭದಲ್ಲಿ ಅನುತ್ತೀರ್ಣರಾದವರನ್ನು ಪರಿಗಣಿಸಲಾಗುವುದು. 18-45 ವಯೋಮಿತಿಯಲ್ಲಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಮಾಹಿತಿ/ಸೌಲಭ್ಯ ಕಲ್ಪಿಸಲು ಸಮರ್ಥರಾಗಿರಬೇಕು. ಗೌರವಧನದ ನೇಮಕಾತಿಯು ಒಂದು ವರ್ಷದ ನಂತರ ಪುನರ್ಪರಿಶೀಲನೆಗೆ ಒಳಪಟ್ಟಿರುತ್ತದೆ. ಪುನರ್ ಪರಿಶೀಲನೆಯಲ್ಲಿ ಕೆಲಸ ಕಾರ್ಯಗಳ ನಿರ್ವಹಣೆ, ವಿಕಲಚೇತನರೊಂದಿಗೆ ಸಂಬಂಧ ವಿವಿಧ ಇಲಾಖೆಗಳೊಂದಿಗೆ/ಸ್ವಯಂ ಸೇವಾ ಸಂಸ್ಥೆ/ಸಮುದಾಯದೊಂದಿಗೆ ವಿಕಲಚೇತನ ಅಭಿವೃದ್ಧಿಗಾಗಿ ಇಟ್ಟುಕೊಂಡಿರುವ ಸಂಬಂಧಗಳನ್ನು ಪರಿಶೀಲಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ಹುದ್ದೆಯು ಗೌರವಧನದ ಆಧಾರದ ಮೇಲೆ ಇರುವುದರಿಂದ ಇವರನ್ನು ಯಾವಾಗ ಬೇಕಾದರೂ ಕೆಲಸದಿಂದ ತೆಗೆದು ಹಾಕಬಹುದಾಗಿದೆ / ಬಿಡುಗಡೆ ಮಾಡಬಹುದಾಗಿದೆ. ಗೌರವಧನ ಆಧಾರದ ಮೇಲೆ ಕೆಲಸ  ನಿರ್ವಹಿಸುವುದರಿಂದ ಖಾಯಂಗೊಳಿಸಲು ಕೋರಲು ಅವಕಾಶವಿರುವುದಿಲ್ಲ. ಸಮರ್ಥ ವಿಕಲಚೇತನರಾಗಿರಬೇಕು ತೀವ್ರತರ ವಿಕಲಚೇತನರಾಗಿರಬಾರದು. ಸಂಬಂಧಪಟ್ಟ ಪಂಚಾಯಿತಿ/ನಗರಸಭೆ ವ್ಯಾಪ್ತಿಯಲ್ಲಿ ವಾಸವಿರುವ ಬಗ್ಗೆ ಕಂದಾಯ ಇಲಾಖೆಯಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ ಲಗತ್ತಿಸುವುದು. ಮಾಹೆಯಾನ ಗೌರವಧನ ರೂ.9,000 ನೀಡಲಾಗುವುದು.

ಆಸಕ್ತ ವಿಕಲಚೇತನ ಸಮರ್ಥ ವ್ಯಕ್ತಿಗಳು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಜೂನ್ 15 ರೊಳಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಇರುವ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 03, ನೆಲಮಹಡಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಗೆ ದೃಢೀಕೃತ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026