ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ದಾವಣಗೆರೆ :ಪ್ರಸಕ್ತ ಸಾಲಿಗೆ ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಯಾವುದೇ ಶಾಲೆಯಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೆÇೀಷಕರು ತಮಗೆ ಸಮೀಪವಿರುವ ಯಾವುದೇ ವಸತಿ ಶಾಲೆಗೆ ಭೇಟಿ ನೀಡಿ ಆನ್‍ಲೈನ್ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಸ್ಯಾಟ್ಸ್ ಸಂಖ್ಯೆ. ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ಇತರೆ ಮೀಸಲಾತಿ ಅನ್ವಯವಾದಲ್ಲಿ ಸಂಬಂಧಪಟ್ಟ ಪ್ರಮಾಣ ಪತ್ರಗಳು ಹಾಗೂ ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ ಅವಶ್ಯಕವಾಗಿರುತ್ತವೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿಯೇ ತಾವು ದಾಖಲಾಗಲು ಬಯಸುವ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಬೇಕು.
ಅಭ್ಯರ್ಥಿಯ ಮೆರಿಟ್. ಮೀಸಲಾತಿ ಹಾಗೂ ಪ್ರವೇಶಾತಿಗಾಗಿ ನಮೂದಿಸಿರುವ ಶಾಲೆಗಳ ಆದ್ಯತಾ ಕ್ರಮದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ Computerised Auto Selection ಮೂಲಕ ಸೀಟು ಹಂಚಿಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ಜನವರಿ 25 ಕೊನೆಯ ದಿನವಾಗಿರುತ್ತದೆ. ಫೆಬ್ರವರಿ 15 ರಂದು ಮಧ್ಯಾಹ್ನ 2.30 ರಿಂದ 4.30 ರವರೆಗೆ ಪರೀಕ್ಷೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ವಸತಿ ಶಾಲೆಗಳ ಪ್ರಾಂಶುಪಾಲರು ಅಥವಾ ಕೆಇಎ ಸಹಾಯವಾಣಿ ಸಂ: 080-23460460 ನ್ನು ಸಂಪರ್ಕಿಸಲು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.