ದಾವಣಗೆರೆ: ಕುರಿ, ಮೇಕೆ ಘಟಕ ಪೂರೈಕೆ ಯೋಜನೆಗಳಿಗೆ ಅರ್ಜಿ ಆಹ್ವಾನ
ದಾವಣಗೆರೆ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ ಈ ವರ್ಷದÀ ಗಿರಿಜನ ಉಪಯೋಜನೆಯಡಿ ಕುರಿ 10 ಮತ್ತು ಮೇಕೆ 1 ಘಟಕ ಪೂರೈಕೆ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯು ನಿಗಮದಲ್ಲಿ ನೊಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಹಾಗು ಪರಿಶಿಷ್ಟ ಪಂಗಡದ 18 ರಿಂದ 60 ವರ್ಷ ವಯೋಮಿತಿಯ ಮಹಿಳಾ ಸದಸ್ಯರು, ಅಥವಾ ಪುರುಷ ಸದಸ್ಯರುಗಳನ್ನು ಹಾಗೂ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳು ಇಲ್ಲದೇ ಇರುವ ಜಿಲ್ಲೆ, ತಾಲೂಕುಗಳಲ್ಲಿಯೂ ಕುರಿ ಸಾಕಾಣಿಕೆದಾರರುಗಳನ್ನು ಫಲಾನುಭವಿಗಳನ್ನಾಗಿ ಸರ್ಕಾರದಿಂದ ರಚಿಸಲಾಗಿರುವ ಜಿಲ್ಲಾ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗುವುದು.
ನಿಗದಿತ ಅರ್ಜಿಗಳನ್ನು ಆಯಾ ತಾಲೂಕು ಮಟ್ಟದ ಸಹಾಯಕ ನಿರ್ದೇಶಕರು, ಮುಖ್ಯ ಪಶುವೈದ್ಯಾಧಿಕಾರಿಗಳು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ.18 ರೊಳಗಾಗಿ ಸಲ್ಲಿಸಲು ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.