LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿದ್ಯಾರ್ಥಿನಿಯರಿಗಾಗಿ ದೀಪಿಕಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ: ಪದವಿ ಅಥವಾ ಡಿಪ್ಲೊಮೊ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗಾಗಿ ‘ದೀಪಿಕಾ ವಿದ್ಯಾರ್ಥಿವೇತನ” ಯೋಜನೆಯಡಿ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜ.30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ದೀಪಿಕಾ ವಿದ್ಯಾರ್ಥಿ ವೇತನವು ಕರ್ನಾಟಕ ಸರ್ಕಾರ ಹಾಗೂ ಅಜೀಂ ಪ್ರೇಮ್‍ಜಿ ಫೌಂಡೇಶನ್ ಸಹಭಾಗಿತ್ವದಲ್ಲಿ ಭಾರತದಲ್ಲಿ ಬಾಲಕಿಯರ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೊಳಿಸಲಾದ ಯೋಜನೆಯಾಗಿದೆ. ಈ ಯೋಜನೆಯಲ್ಲಿ ವಿದ್ಯಾರ್ಥಿನಿಯರಿಗೆ ವಾರ್ಷಿಕ ರೂ.30,000/- ಮೊತ್ತದ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನವನ್ನು ಅವರ ಮೊದಲ ಪದವಿ ಅಥವಾ ಡಿಪ್ಲೊಮೊ ಕಾರ್ಯಕ್ರಮದ ಪೂರ್ಣ ಅವಧಿಗೆ ನೀಡಲಾಗುವುದು.

ಆಸಕ್ತ ವಿದ್ಯಾರ್ಥಿನಿಯರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, 10ನೇ ತರಗತಿ ಹಾಗೂ 12ನೇ ತರಗತಿಯ ಅಂಕಪಟ್ಟಿ, 2025-26ನೇ ಸಾಲಿಗೆ ಪ್ರಥಮ ವರ್ಷದ ಪದವಿ ಅಥವಾ ಡಿಪ್ಲೊಮೊಗೆ ದಾಖಲಾಗಿರುವ ಬಗ್ಗೆ ಬೋನೋಫೈಡ್ (ದಾಖಲಾತಿ ನೈಜತೆ ಪ್ರಮಾಣ ಪತ್ರ) ಅಥವಾ ಬೋಧನಾ ಶುಲ್ಕದ ರಸೀದಿ, ಭಾವಚಿತ್ರ, ಸಹಿ ಅರ್ಜಿಯೊಂದಿಗೆ ಜ.30ರ ಒಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026