LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪರಿಶಿಷ್ಟ ಜಾತಿಯ ಯುವಕರಿಗೆ ಉಚಿತ ಜಿಮ್ ಮತ್ತು ಫಿಟ್ನೆಸ್ ತರಬೇತಿ: ಅರ್ಜಿ ಆಹ್ವಾನ

 

ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನಡಿ 15 ದಿನಗಳ ಉಚಿತ ಜಿಮ್ ಮತ್ತು ಫಿಟ್ನೆಸ್ ತರಬೇತಿ ಶಿಬಿರವನ್ನು ಆಯೋಜಿಸಿದೆ. 18 ರಿಂದ 35 ವರ್ಷದೊಳಗಿನ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರುವ ಪರಿಶಿಷ್ಟ ಜಾತಿಯ ಯುವಕರು ಮಾತ್ರ ಅರ್ಜಿ ಸಲ್ಲಿಸಬಹುದು.

ಬೆಂಗಳೂರಿನ ಪ್ರತಿಷ್ಠಿತ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಫೆಬ್ರವರಿ 1 ರಿಂದ ಮಾರ್ಚ್ 17 ವರೆಗೆ ತರಬೇತಿ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ವತಿಯಿಂದಲೇ ಉಚಿತ ವಸತಿ, ಊಟ ಮತ್ತು ಉಪಹಾರದ ವ್ಯವಸ್ಥೆ ಕಲ್ಪಿಸಲಾಗುವುದು. ತರಬೇತಿಯ ನಂತರ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು.

ಆಸಕ್ತರು ನಗರದ ಓನಕೆ ಒಬವ್ವ ಕ್ರೀಡಾಂಗಣದಲ್ಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಅಗತ್ಯ ದಾಖಲೆಗಳೊಂದಿಗೆ ಜನವರಿ 28 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235635 ಗೆ ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕಿ ಎಸ್.ಎಂ.ನೆಲವಗಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026