ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ : ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2023ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಅರ್ಜಿಗಳನ್ನು ಡಿಸೆಂಬರ್ 20ರೊಳಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ 08192-237480 ಸಂಪರ್ಕಿಸಲು ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.