LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಿಲಿಟರಿ ಬಾಲಕಿಯರ ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ


ಬಳ್ಳಾರಿ,ಏ.10

ಧಾರವಾಡದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2026-27ನೇ ಶೈಕ್ಷಣಿಕ ವರ್ಷದ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಯುದ್ಧದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಬಳ್ಳಾರಿ ಜಿಲ್ಲೆಯ ಹೆಣ್ಣು ಮಕ್ಕಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

5 ನೇ ತರಗತಿಯಿಂದ ಪಿಯುಸಿ-2 ವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಅರ್ಹರಾಗಿರುತ್ತಾರೆ. ಧಾರವಾಡ ನಗರದ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಮಾತ್ರ ಈ ವಸತಿ ನಿಲಯದಲ್ಲಿ ಅವಕಾಶವಿರುತ್ತದೆ. ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ವಸತಿ ಮತ್ತು ಊಟೋಪಚಾರದ ವ್ಯವಸ್ಥೆಯು ಸಂಪೂರ್ಣ ಉಚಿತವಾಗಿರುತ್ತದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉದಯ ಹಾಸ್ಟೇಲ್ ಸರ್ಕಲ್, ಸೈನಿಕ ವಿಶ್ರಾಂತಿ ಗೃಹ ಆವರಣ, ಧಾರವಾಡ. (ದೂ.0836-2440176) ಈ ವಿಳಾಸಕ್ಕೆ ಸಂಪರ್ಕಿಸಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಮೇ 05 ರೊಳಗಾಗಿ ಸಲ್ಲಿಸಬಹುದಾಗಿದೆ. ಮಾಜಿ ಸೈನಿಕರ ಮಕ್ಕಳು ಈ ಸೌಲಭ್ಯದ ಸದುಪಯೋಗಪಡೆದುಕೊಳ್ಳಬೇಕು ಎಂದು ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು