ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನ
ಬೆಂ.ಗ್ರಾ.ಜಿಲ್ಲೆ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದ್ದು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ Food Craft Institute (FCI) ಹಾಗೂ Institute of Hotel Management (IHM) ಬೆಂಗಳೂರು ರವರ ಮೂಲಕ ವಸತಿ ಸಹಿತ ತರಬೇತಿಯನ್ನು ನೀಡಲಾಗುತ್ತದೆ.
ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಮೇ. 8 ರೊಳಗೆ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ನಂ.09, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಚಿದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಕಛೇರಿ ಸಮಯದಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.080-22040633 ಗೆ ಕಛೇರಿಯ ಸಮಯದಲ್ಲಿ ಸಂಪರ್ಕಿಸಲು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.