LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಗೌರವ ಪ್ರಶಸ್ತಿಗಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಅರ್ಜಿ ಆಹ್ವಾನ"


ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 21, 2024 ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2024-25ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಗೆ ಬಾಲಗೌರವ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.



ಮಕ್ಕಳು ಕ್ರೀಡೆ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ, ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ ಹೀಗೆ 07 ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಗುವಾಗಿರಬೇಕು.

ಇಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಆಗಸ್ಟ್ 26 ತಾರೀಖಿನೊಳನ್ನೊಳಗೆ ಅಕಾಡೆಮಿಯ ಕೇಂದ್ರ ಕಛೇರಿ ವಿಳಾಸ: ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇಜೌಟ್ ಹಿಂಭಾಗ, ಕೆ,ಎಚ್.ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ- 580004 ದೂರವಾಣಿ ಸಂ:0836-246590 ಇಲ್ಲಿಗೆ ಪೋಸ್ಟ್ ಮುಖಾಂತರ ತಲುಪುವಂತೆ ಕಳುಹಿಸುವುದು. ನಂತರ ಬಂದ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ. ಹಾಗೇಯೇ ಈಗಾಗಲೇ ಬಾಲಗೌರವ ಪ್ರಶಸ್ತಿ ಪಡೆದವರ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ.

ಪ್ರಶಸ್ತಿಯ ಅರ್ಜಿ ನಮೂನೆ/ಮಾನದಂಡಗಳನ್ನು ಕಛೇರಿಯ ವೆಬ್ಸೈಟ್ ಲಿಂಕ್ https://balavikasaacademy.karnataka.gov.in/ ನಲ್ಲಿ ವೀಕ್ಷಿಸಬಹಿದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು