LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಮಡಿಕೇರಿ ಆ.09-ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ವಿವಿಧ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗಳಡಿ ಸಹಾಯಧನ/ ಸಾಲ, ಸೌಲಭ್ಯ ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ. (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ).

ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50 ಲಕ್ಷಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ. 1.20 ಲಕ್ಷಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ಮೀಸಲಾತಿ ಇರಿಸಿದೆ.

ರಾಜ್ಯ ಸರ್ಕಾರದ/ ನಿಗಮದ ಯೋಜನೆಗಳ ವಿವರ: ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಯೋಜನೆಗಳು: ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ), ಗಂಗಾ ಕಲ್ಯಾಣ ಯೋಜನೆ. ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಹೊಂದಿರಬೇಕು.

ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ. ವಿದೇಶಿ ವ್ಯಾಸಂಗ ಯೋಜನೆ-ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.8 ಲಕ್ಷಗಳ ಮಿತಿಯಲ್ಲಿರಬೇಕು. ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ-ಈ ಯೋಜನೆಯಡಿ ಅರ್ಜಿಯನ್ನು www.kaushalkar.com ನಲ್ಲಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು. (ಶ್ರೀ /ಶ್ರೀಮತಿ /ಕುಮಾರಿ ಮುಂತಾದ ಮಾಹಿತಿಗಳು).

ಬೆಂಗಳೂರು-ಒನ್/ ಕರ್ನಾಟಕ-ಒನ್/ ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ನಡಿ ಅರ್ಜಿ ಸಲ್ಲಿಸಲು ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ಸೈಟ್: https://kvcdcl.karnataka.gov.in ರಲ್ಲಿ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳು ಅಭಿವೃದ್ಧಿ ನಿಗಮ., ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ ದಲ್ಲಿ ಪಡೆಯಬಹುದಾಗಿದೆ ಅಥವಾ ಕಚೇರಿ ದೂರವಾಣಿ ಸಂಖ್ಯೆ 08182-229634 ಕ್ಕೆ ಸಂಪರ್ಕಿಸಬಹುದಾಗಿದೆ.

ಜಿಲ್ಲೆಗಳಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಪಡೆಯಬಹುದಾಗಿದೆ.

2023-24 ನೇ ಸಾಲಿನಲ್ಲಿ ಯೋಜನೆಗೆ ಅರ್ಜಿಸಲ್ಲಿಸಿರುವ ಅರ್ಜಿದಾರರು ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ” ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆ ದಿನವಾಗಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು