LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿವಿಧ ಯೋಜನೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ.!

 

ಬೆಂಗಳೂರು ಗ್ರಾಮಾಂತರ ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26 ನೇ ಸಾಲಿನ 13 ಫಲಾನುಭವಿ ಆಧಾರಿತ ಯೋಜನೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ,ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಯೋಜನೆ,ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ  ಬ್ರೆಲ್ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.

 

ಅರ್ಹ ವಿಕಲಚೇತನರು ಆನ್ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಗ್ರಾಮ ಒನ್, ಕರ್ನಾಟಕ ಓನ್, ಬೆಂಗಳೂರು ಓನ್ ಹಾಗೂ ನೇರವಾಗಿಯು ಸಹ ವಿಕಲಚೇತನ ವ್ಯಕ್ತಿಗಳು https://sevasindhu.karnataka.gov.in/Sevasindhu/DepartmentServices ಜಾಲತಾಣದಲ್ಲಿ ನವೆಂಬರ್ 15 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ನಂ 3, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು  ಹಾಗೂ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ:-08029787441 ಗೆ ಅಥವಾ ಹತ್ತಿರದ ಗ್ರಾಮ ಪಂಚಾಯಿತಿ/ಪಟ್ಟಣ ಪಂಚಾಯಿತಿ/ ಪುರಸಭೆ/ನಗರಸಭೆ/ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ/ನಗರ/ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026