ಶಿವಮೊಗ್ಗ ಮಾ.04: ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್‌ರವರ ಜನ್ಮ ದಿನಾಚರಣೆ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯ ಮಟ್ಟದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಯಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.
2026-27ನೇ ಸಾಲಿನಲ್ಲಿ ಏಪ್ರಿಲ್ 05 ರಂದು ಡಾ.ಬಾಬು ಜಗಜೀವನರಾಂ ರವರ 119ನೇ ಜನ್ಮದಿನಾಚರಣೆ ಹಾಗೂ ಏಪ್ರಿಲ್ 14 ರಂದು ಡಾ.ಬಿ ಆರ್. ಅಂಬೇಡ್ಕರ್‌ರವರ 135 ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಈ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿದಾರರು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಇಲ್ಲಿ ಮಾರ್ಚ್ 9 ರೊಳಗೆ ದಾಖಲಾತಿಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಿ ಮಲ್ಲೇಶಪ್ಪ ತಿಳಿಸಿದ್ದಾರೆ.