ಎಸ್.ಟಿ.ವಿದ್ಯಾರ್ಥಿಗಳಿಂದ ಫೆಲೋಶಿಪ್ ಗೆ ಅರ್ಜಿ ಆಹ್ವಾನ.!
ಚಿತ್ರದುರ್ಗ: ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಎಸ್.ಟಿ. (ಪರಿಶಿಷ್ಟ ಪಂಗಡ) ಸಂಶೋದನಾ ವಿದ್ಯಾರ್ಥಿಗಳಿಗೆ ಮಾಸಿಕ 25,000 ಸಾವಿರ ಶಿಷ್ಯವೇತನಕ್ಕೆ ಆಯ್ಕೆ ಮಾಡಲು ಪರಿಶಿಷ್ಟ ವರ್ಗಗಳ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರದ ಆಯವ್ಯಯದಲ್ಲಿ ಘೋಷಣೆಯಂತೆ ಯಾವುದೇ ಫೆಲೋಶಿಪ್ ಪಡೆಯದ ಎಸ್.ಟಿ. ಸಮುದಾಯಕ್ಕೆ ಸೇರಿದ ಸಂಶೋಧನ ವಿದ್ಯಾರ್ಥಿಗಳಿಗೆ ಫಿಲೋಶಿಫ್ ನೀಡಲಾಗುವುದು. ಡಿ.14 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ನಗರದ ಜೆ.ಸಿ.ಆರ್.ಬಡಾವಣೆ, ಗಣಪತಿ ದೇವಸ್ಥಾನದ ಹತ್ತಿರದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಚೇರಿಯಲ್ಲಿ ಇದೇ ನ.21 ರಿಂದ ಅರ್ಜಿ ಪಡೆದು ಡಿ.14ರ ಸಂಜೆ 5.30ರೊಳಗೆ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.