LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯ ವತಿಯಿಂದ 2026 ರ ಜುಲೈ, 01 ರಿಂದ 6 ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್ ಸಹಕಾರ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದ್ದು, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕುಗಳು ನಮ್ಮ ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವುದರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೇ, 11 ರಿಂದ ಅರ್ಜಿ ಸಲ್ಲಿಸಬಹುದು. ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್ ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.500 ಶಿಷ್ಯವೇತನ ಮತ್ತು ವಿಶೇಷ ನಿರುದ್ಯೋಗ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.600 ಶಿಷ್ಯವೇತನ ನೀಡಲಾಗುವುದು ಹಾಗೂ ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಉಚಿತ ವಸತಿ ಗೃಹದ ವ್ಯವಸ್ಥೆ ಇರುತ್ತದೆ.

ಹಾಗೆಯೇ ದೂರಶಿಕ್ಷಣ“ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್” ಪ್ರವೇಶ ಪ್ರಾರಂಭ ಕೋರ್ಸ್ ಅವಧಿ 6 ತಿಂಗಳು(ಸಹಕಾರ ಸಂಘ/ಸಂಸ್ಥೆ/ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಮಾತ್ರ). ಇತ್ತೀಚಿನ ಕಾಯಿದೆ ತಿದ್ದುಪಡಿ ಅನ್ವಯ ಕೆಸಿಎಸ್ ನಿಯಮ 17(ಎ)(ಬಿ) ಪ್ರಕಾರ ಪದೋನ್ನತಿ ಹೊಂದಬೇಕಾದರೆ ಕಡ್ಡಾಯವಾಗಿ ಡಿಸಿಎಂ ಕೋರ್ಸ್ ಪಡೆಯಬೇಕಾಗುತ್ತದೆ.

ಪ್ರತಿ ವರ್ಷ ಜನವರಿ-ಜೂನ್ ಮತ್ತು ಜುಲೈ-ಡಿಸೆಂಬರ್‍ವರೆಗೆ ಎರಡು ಅಧಿವೇಶನಗಳು, ಅಧ್ಯಯನ ಸಾಹಿತ್ಯ ನೀಡಲಾಗುವುದು. 6 ತಿಂಗಳ ಅವಧಿಯಲ್ಲಿ (5+5=10) 02 ದಿನಗಳ ಸಂಪರ್ಕ ತರಗತಿಗಳು, ಹೈಬ್ರಿಡ್ ಮಾದರಿಯಲ್ಲಿ ಆಫ್‍ಲೈನ್ ತರಗತಿಗಳು, ಸಹಕಾರ ವಾರಪತ್ರಿಕೆಯನ್ನು ನೀಡಲಾಗುವುದು. ತರಬೇತಿ ಪೂರ್ಣಗೊಳಿಸಿದವರಿಗೆ ಅಂಕಪಟ್ಟಿ ಮತ್ತು ಪ್ರಶಸ್ತಿಪತ್ರ ನೀಡಲಾಗುವುದು. ಆನ್‍ಲೈನ್‍ನಲ್ಲಿ ಪ್ರವೇಶಾತಿ ಲಿಂಕ್ ವೆಬ್‍ಸೈಟ್: www.kscfdcm.co.inನ್ನು ಸಂಪರ್ಕಿಸಬಹುದು.

ಅರ್ಜಿ ಫಾರಂನ್ನು ಪ್ರಾಂಶುಪಾಲರು, ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಮುತ್ತಪ್ಪ ದೇವಸ್ಥಾನದ ಹತ್ತಿರ, ಅಬ್ಬಿಫಾಲ್ಸ್ ರಸ್ತೆ, ಮಡಿಕೇರಿ 571201, ದೂ.ಸಂ.9902189872, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ನಿ., ಪೆನ್ಷನ್‍ಲೇನ್, ನಗರಸಭೆ ಹಿಂಭಾಗ ರಸ್ತೆ, ಮಡಿಕೇರಿ 571201, ದೂ.ಸಂ.8073793669, ಮುಖ್ಯಕಾರ್ಯನಿರ್ವಹಣಾಧಿಕಾರಿ, ಹಾಸನ ಜಿಲ್ಲಾ ಸಹಕಾರ ಯೂನಿಯನ್, ನಿ., ಹಳೇ ಬಸ್ ನಿಲ್ದಾಣದ ಹತ್ತಿರ, ಹಾಸನ 573201, ದೂ.ಸಂ.9845253639 ಇಲ್ಲಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂ.9663153922, 8762925862, 8762110952 ನ್ನು ಸಂಪರ್ಕಿಸಬಹುದು ಎಂದು ಕೆಐಸಿಎಂ ಪುಟ್ಟಸ್ವಾಮಿ ಅವರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲೆಗಳಲ್ಲಿ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ಕೇಸರಿ ಶಾಲು ಹಾಕಲೂ ಅವಕಾಶ ನೀಡಬೇಕು: ಯತ್ನಾಳ್ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಅಂತ ಬುಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಹೊಸ ಆ್ಯಪ್!ವರ್ಗಾವಣೆ ನಿರೀಕ್ಷೆಯಲ್ಲಿದ್ದ ಪದವಿ ಕಾಲೇಜು ಬೋಧಕರಿಗೆ ಗುಡ್ ನ್ಯೂಸ್: ವೇಳಾಪಟ್ಟಿ ಪ್ರಕಟಶೇ. 12.5 ರಷ್ಟು ವೇತನ ಹೆಚ್ಚಳ ಒಪ್ಪದ ಸಾರಿಗೆ ನೌಕರರು, ಮೇ 20ರಿಂದ ಮುಷ್ಕರದ ಎಚ್ಚರಿಕೆBIG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು: ಸರ್ಕಾರದಿಂದ ಮಹತ್ವದ ಆದೇಶALERT : ಸಾರ್ವಜನಿಕರೇ ಎಚ್ಚರ : ಶೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ ಉದ್ಯಮಿಗೆ 16 ಕೋಟಿ ರೂ. ವಂಚನೆ!ಮೇ 18 ರಿಂದ SSLC ಪರೀಕ್ಷೆ-2 ಆರಂಭ ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆGOOD NEWS : ಉದ್ಯೋಗಿಗಳಿಗೆ ಗುಡ್ ನ್ಯೂಸ್ ; ಬೆಂಗಳೂರಿನ ಕೆಲ ಕಂಪನಿಗಳಿಂದ ‘ವರ್ಕ್ ಫ್ರಮ್ ಹೋಮ್’ ನೀಡಲು ಚಿಂತನೆ.!ಬೈಕ್ ಬಾಕ್ಸ್ ನಲ್ಲಿದ್ದ 1 ಲಕ್ಷ ಹಣ ಕದ್ದು ಪರಾರಿಯಾದ ಖದೀಮರು: ಪೊಲೀಸ್ ಠಾಣೆ ಎದುರೇ ಘಟನೆBIG NEWS : ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ 24 ಮಕ್ಕಳ ರಕ್ಷಣೆ : ಮದರಸಾದ ನರಕಯಾತನೆ ಬಿಚ್ಚಿಟ್ಟ ಬಿಹಾರದ ಬಾಲಕರು.!