ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಗೌರವಧನ ಆಧಾರದ ಮೇಲೆ ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಹಾಗೂ ಜಿಲ್ಲಾ ಕಾರ್ಯಕ್ರಮ ಸಹಾಯಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸದರಿ ನೇಮಕಾತಿಯು 12 ತಿಂಗಳ ಅವಧಿಯಾಗಿದ್ದು, ಕೆಲಸ ನಿರ್ವಹಣೆಯ ಆಧಾರದ ಮೇರೆಗೆ ಹುದ್ದೆಯನ್ನು ಜಿಲ್ಲಾ ಸಮಿತಿ ಅನುಮೋದನೆ ಮೇರೆಗೆ ಮುಂದಿನ ಅವಧಿಗೆ ಮುಂದುವರಿಸಲಾಗುವುದು ಮೇರೆಗೆ ಭರ್ತಿ ಮಾಡಿಕೊಳ್ಳಲಾಗುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರ ಹುದ್ದೆಗೆ 30,000 ಹಾಗೂ ಜಿಲ್ಲಾ ಕಾರ್ಯಕ್ರಮ ಸಾಹಿತ್ಯ ಹುದ್ದೆಗೆ 18 ಸಾವಿರ ಮಾಸಿಕ ವೇತನ ವಾಗಿ ನೀಡಲಾಗುವುದು.
ಅಭ್ಯರ್ಥಿಗಳ ವಯೋಮಿತಿಯು ಕನಿಷ್ಟ 21 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು ಸದರಿ ಯೋಜನೆಯು ಕೇಂದ್ರ ಪರಿಸ್ಕೃತ ಯೋಜನೆಯಾಗಿರುವುದರಿಂದ ಕನ್ನಡ ಮತ್ತು ಇಂಗ್ಲಿಷ್ ಅಥವಾ ಭಾಷಾಜ್ಞಾನ ಅಗತ್ಯವಾಗಿರುತ್ತದೆ.
ಸದರಿ ಹುದ್ದೆಗೆ ಯಾವುದೇ ಮೀಸಲಾತಿ ಅನ್ವಯಿಸುವುದಿಲ್ಲ ಅಭ್ಯರ್ಥಿಗಳ ಕಂಪ್ಯೂಟರ್ ಜ್ಞಾನದ ಬಗ್ಗೆ ಖಾತ್ರಿಪಡಿಸಿಕೊಂಡು ಕೌಶಲ್ಯ ಪರೀಕ್ಷೆ ನಡೆಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ನಮೂನೆಯನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ.ಎಚ್. ಮರಿಗೌಡ ರಸ್ತೆ, ಇಲ್ಲಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಆಕ್ಟೋಬರ್ 29 . 2026 ರೊಳಗೆ ಇದೇ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ 080-29578688 ಅಥವಾ ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.