Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ನಿಗಮ ಮಂಡಳಿ ನೇಮಕ ಇನ್ನಷ್ಟು ಚುರುಕು

 

ಬೆಂಗಳೂರು :
ನಿಗಮ, ಮಂಡಳಿಗಳ ನಾಮನಿರ್ದೇಶನಕ್ಕೆ ಸಂಬಂಧಿಸಿದಂತೆ ಇಬ್ಬರೂ ಶುಕ್ರವಾರ ನಾಲ್ಕು ಗಂಟೆ ಚರ್ಚೆ ನಡೆಸಿದ್ದಾರೆ.

ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ 15 ರಿಂದ 20 ಶಾಸಕರಿಗೆ ಆಯಕಟ್ಟಿನ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನಪಡಿಸಲು ನಿರ್ಧರಿಸಲಾಗಿದೆ. ವಾರದೊಳಗೆ ಆದೇಶವನ್ನೂ ಹೊರಡಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚು ಅನುಕೂಲವಾಗುವಂತೆ ನಿಗಮ, ಮಂಡಳಿಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ನೀಡಬೇಕೆಂಬ ಬೇಡಿಕೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್‌ ಮುಂದಿಟ್ಟಿದ್ದರು. ಆದರೆ, ಚುನಾವಣೆ ಸಂದರ್ಭದಲ್ಲಿ ಶಾಸಕರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕದಂತೆ ತಡೆಯಲು ಅವರಿಗೆ ಪ್ರಮುಖ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡುವುದು ಅನಿವಾರ್ಯ ಎಂದು ಸಿದ್ದರಾಮಯ್ಯ ಅವರು ಮನವೊಲಿಸಿದ್ದಾರೆ ಎಂದು ಗೊತ್ತಾಗಿದೆ.

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಜತೆ ಶಿವಕುಮಾರ್‌ ಅವರು ನಿಗಮ, ಮಂಡಳಿ ನೇಮಕಾತಿ ಕುರಿತು ಇತ್ತೀಚೆಗೆ ಚರ್ಚೆ ನಡೆಸಿದ್ದರು. ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್‌ ಉಸ್ತುವಾರಿಯಾಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಜತೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರುವಂತೆ ಖರ್ಗೆ ಮತ್ತು ವೇಣುಗೋಪಾಲ್‌ ಸೂಚಿಸಿದ್ದರು. ಸುರ್ಜೇವಾಲಾ ಅವರು ಮಧ್ಯಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿದ್ದಾರೆ. ಅವರ ಜತೆ ಚರ್ಚಿಸಿದ ಬಳಿಕ ನಿಗಮ, ಮಂಡಳಿಗಳ ನೇಮಕಾತಿ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ’ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಪ್ರಾದೇಶವಾರು, ಜಾತಿವಾರು ಪ್ರಾತಿನಿಧ್ಯಗಳನ್ನು ನಿಗಮ, ಮಂಡಳಿಗಳ ನೇಮಕಾತಿಯಲ್ಲೂ ನೀಡಲು ನಿರ್ಧರಿಸಲಾಗಿದೆ. ಸಂಪುಟ ಸೇರಲು ಬಯಸಿರುವ ಕೆಲವು ಹಿರಿಯ ಶಾಸಕರನ್ನೂ ನಿಗಮ, ಮಂಡಳಿಗಳ ಅಧ್ಯಕ್ಷರಾಗುವಂತೆ ಮನವೊಲಿಕೆ ಮಾಡಲು ಸಿದ್ಧತೆ ನಡೆದಿದೆ ಎಂದು ಮೂಲಗಳು ಹೇಳಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ