LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇ-ಸ್ವತ್ತು ತಂತ್ರಾಂಶ: ಸಹಾಯವಾಣಿ ಕಾರ್ಯಕ್ಕೆ ಅಧಿಕಾರಿಗಳ ನಿಯೋಜನೆ



ಕೊಪ್ಪಳ ಡಿಸೆಂಬರ್ 05 ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅನುಷ್ಠಾನ ಮಾಡಿರುವುದರಿಂದ ಪ್ರಾರಂಭದಲ್ಲಿ ಸಾರ್ವಜನಿಕರ ಕರೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತಿ ವತಿಯಿಂದ ಸಹಾಯವಾಣಿ ಪ್ರಾರಂಭಿಸಿದ್ದು, ಇ-ಸ್ವತ್ತು ತಂತ್ರಾಂಶ ಹಾಗೂ ನಿಯಮಗಳನ್ವಯ ಉತ್ತರಿಸುವ ಬಗ್ಗೆ, ಮಾರ್ಗದರ್ಶನ ನೀಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ನಿಯೋಜಿಸಿ ಆದೇಶಿಸಲಾಗಿದೆ.

ಜಿಲ್ಲಾ ಪಂಚಾಯತಿಯ ಆದೇಶದನ್ವಯ ಕುಷ್ಟಗಿ ತಾಲ್ಲೂಕಿನ ಹನುಮನಾಳ ಗ್ರಾಮ ಪಂಚಾಯತಿ ಪಿಡಿಒ ಪ್ರಶಾಂತ್ ಹಿರೇಮಠ್ ಅವರು ಡಿಸೆಂಬರ್ 5, ಡಿ.10, ಡಿ.16, ಡಿ.20 ಹಾಗೂ ಡಿ.26 ರಂದು, ಕುಕನೂರು ತಾಲ್ಲೂಕಿನ ಭಾನಾಪುರ ಗ್ರಾಮ ಪಂಚಾಯತಿ ಪಿಡಿಒ ರಮೇಶ್ ತಿಮ್ಮಾರೆಡ್ಡಿ ಅವರು ಡಿ.6, ಡಿ.11, ಡಿ.17, ಡಿ.22 ಹಾಗೂ ಡಿ.29 ರಂದು, ಗಂಗಾವತಿ ತಾಲ್ಲೂಕಿನ ಕೇಸರಹಟ್ಟಿ ಗ್ರಾಮ ಪಂಚಾಯತಿ ಪಿಡಿಒ ಶಂಶೀರ್ ಅಲಿ ಅವರು ಡಿ.8, ಡಿ.12, ಡಿ.18, ಡಿ.23 ಹಾಗೂ ಡಿ.30 ರಂದು ಮತ್ತು ಯಲಬುರ್ಗಾ ತಾಲ್ಲೂಕಿನ ಬೇವೂರು ಗ್ರಾಮ ಪಂಚಾಯತಿ ಪಿಡಿಒ ಅಬ್ದುಲ್ ಗಫರ್ ಅವರು ಡಿ.9, ಡಿ.15, ಡಿ.19, ಡಿ.24 ಹಾಗೂ ಡಿ.31 ರಂದು ಜಿಲ್ಲಾ ಪಂಚಾಯತಿ ಕಾರ್ಯಾಲಯಕ್ಕೆ ಹಾಜರಾಗಿ ಬೆಳಿಗ್ಗೆ 9 ಗಂಟೆಯಿ0ದ ಸಂಜೆ 6 ಗಂಟೆಯವರೆಗೆ ಕರ್ತವ್ಯ ನಿರ್ವಹಿಸಬೇಕು.

ಸಹಾಯವಾಣಿ ಸಂಖ್ಯೆ:08539221207 ಆಗಿದ್ದು, ಸಾರ್ವಜನಿಕರು 2 ಮತ್ತು 4ನೇ ಶನಿವಾರ, ಭಾನುವಾರ ಹಾಗೂ ರಜೆ ದಿನಗಳನ್ನು ಹೊರತುಪಡಿಸಿ ಮೇಲೆ ತಿಳಿಸಿದ ದಿನಾಂಕಗಳಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಕಚೇರಿ ಅವಧಿಯಲ್ಲಿ ಸಹಾಯವಾಣಿಗೆ ಸಂಪರ್ಕಿಸಿ ನಿಯೋಜಿತ ಅಧಿಕಾರಿಗಳಿಂದ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಪಂಚಾಯತ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು