Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶಿರಸಿ ಮಾರಿಜಾತ್ರೆಯಲ್ಲಿ ಕಳ್ಳತನಕ್ಕೆ ಸ್ಕೆಚ್ ಹಾಕಿದ್ದ ಅಂತಾರಾಜ್ಯ ಕಳ್ಳರ ಬಂಧನ

ಯಲ್ಲಾಪುರ : ಇಲ್ಲಿ ದರೋಡೆ ನಡೆಸಿ ಮುಂದೆ ಶಿರಸಿ ಮಾರಿಕಾಂಬಾ ದೇವಿ ಜಾತ್ರೆಯಲ್ಲಿ ದರೋಡೆ ಮಾಡಲು ಯೋಜಿಸಿದ್ದ ಎಂಟು ಜನ ಅಂತಾರಾಜ್ಯ ದರೋಡೆಕೋರರನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ ಬಳಿಯ ಕೆ ಮಿಲನ್ ಹೋಟೆಲ್ ಹತ್ತಿರ ಬುಧವಾರ ಬೆಳಗಿನ ಜಾವ ಪೋಲಿಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಪಿಎಸ್ಐ ಸಿದ್ದಪ್ಪ ಗುಡಿ ತಮ್ಮ ತಂಡದೊಂದಿಗೆ ದಾಳಿ ನಡೆಸಿದ್ದು, ಬಂಧಿತರು ಮಹಾರಾಷ್ಟ್ರದವರು ಎನ್ನಲಾಗಿದೆ. ಬಂಧಿತ ಆರೋಪಿಗಳನ್ನು ಉಮೇಶ ರಾಮಾ ಗಾಯಕವಾಡ (35) ಪುಣೆ, ಶ್ರೀನಾಥ ಶಂಕರ ಜಾಡವ(39) ಥಾಣೆ, ಲಖನ್ ಸುಹಾಸ ಜಾದವ (30) ಪುಣೆ , ಪ್ರಶಾಂತ ಅಖಿಲ್ ಪವಾರ (35) ಥಾಣೆ, ದೀಪಕ ಚೆಂದರಲಾಲ್ ದುಂಬಾನಿ (47) ಥಾಣೆ, ಸುಂದರ ಕೈಲಾಸ ಗಾಯಕವಾಡ (50) ಥಾಣೆ, ನಾಗುಬಾಯಿ ಗಣೇಶ ಜಾದವ (50), ಥಾಣೆ, ಅಂಬಿಕಾ ಪ್ರಕಾಶ ಜಾಧವ (39)ಥಾಣೆ ಎಂದು ಗುರುತಿಸಲಾಗಿದೆ.
ಆರೋಪಿತರು ಈ ಹಿಂದೆ ದಕ್ಷಿಣ ಭಾರತದ ಪ್ರವಾಸಿ ತಾಣ ಹಾಗೂ ಪ್ರಸಿದ್ದ ದೇವಸ್ಥಾನಗಳಿಗೆ ಭೇಟಿ ನೀಡಿ ಜನಸಂದಣಿ ಇರುವ ಪ್ರದೇಶದಲ್ಲಿ ಪಿಕ್ ಪಾಕೇಟ್, ಮಹಿಳೆಯರ ಚೈನ್ ಸರ ಕಳ್ಳತನ, ಚಿನ್ನದ ಬಳೆಗಳನ್ನು ಕಳ್ಳತನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ದಕ್ಷಿಣ ಭಾರತದ ಸುಪ್ರಸಿದ್ಧ ಜಾತ್ರೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಜಾತ್ರೆಗಳಿಗೆ ಹೋಗಿ ಕಳ್ಳತನ ಮಾಡುತ್ತಿದ್ದರು ಎನ್ನಲಾಗಿದೆ. ಈ ಆರೋಪಿತರು ಕಳೆದ 3-4 ವರ್ಷದಿಂದ ಸತತವಾಗಿ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಲ್ಲಿ ಕಳ್ಳತನ ದರೋಡೆ, ಸುಲಿಗೆ ಮಾಡುತ್ತಿರುವ ಗ್ಯಾಂಗ್‌ ಸದಸ್ಯರಾಗಿದ್ದಾರೆ ಹಾಗೂ ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಮುರ್ಡೇಶ್ವರ ಕಡೆಗಳಲ್ಲಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಈಗ ಅವರು ಶಿರಸಿಯ ಸುಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯಲ್ಲಿ ಕಳ್ಳತನ ಮಾಡುವ ಇರಾದೆಯಿಂದ ಈ ಕಡೆ ಬಂದಿರುವುದಾಗಿ ಬಾಯ್ಬಿಟಿದ್ದಾರೆ. ಆರೋಪಿತರಿಂದ 1 ಮಾರುತಿ ಎರ್ಟಿಗಾ ಕಾರು, 4 ಲಕ್ಷ ರೂ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸ್‌ ವರಿಷ್ಠಾಧಿಕಾರಿ ದೀಪನ್ ಎಂ. ಎನ್., ಡಿವೈಎಸ್ಪಿ ಗೀತಾ ಪಾಟೀಲ ಮಾರ್ಗದರ್ಶನದಲ್ಲಿ ಸಿಪಿಐ ರಮೇಶ ಹನಾಪುರ ಪಿಎಸ್ಐ ಶ್ರೀಧರ ಎಸ್ ಆರ್, ಸಿದ್ದಪ್ಪ ಗುಡಿ ನೇತೃತ್ವದಲ್ಲಿ ಪಿಎಸ್‌ಐಗಳಾದ ರಾಜಶೇಖರ ವಂದಲಿ, ಅನಿಲ ಮಾದರ, ಮಹಾಂತೇಶ ಕುಂಬಾರ, ಎ ಎಸ್ ಐ ಗಜಾನನ ನಾಯ್ಕ, ಹಾಗೂ ಸಿಬ್ಬಂದಿ ಮಹಮ್ಮದ್ ಶಫೀ ಶೇಖ್, ರಾಜೇಶ ನಾಯ್ಕ, ಬಸವರಾಜ ಹಗರಿ, ಪ್ರಶಾಂತ ಪಾವುಸ್ಥರ, ಚಂದ್ರಪ್ಪ, ಶೋಭಾ ನಾಯ್ಕ, ರೇಖಾ ಎಂ. ಎಸ್. ,ಶ್ರೀಕಾಂತ ಕಟಬರ, ಪರಮೇಶ್ವರ ಬೆಂಡಗಟ್ಟಿ. ಬಸವರಾಜ ಕಂಬಳಿ, ಗಿರೀಶ ಲಮಾಣಿ, ಪರಮೇಶ್ವರ ಎಸ್. ನಾಗರಾಜ ನಾಯ್ಕ, ಸುರೇಶ, ಮಹಾವೀರ, ಚನ್ನಕೇಶವ, ರಾಚಪ್ಪ, ಗಂಗಾಧರ, ಸಂತೋಷ ಬಾಳೆ, ಹಾಗೂ ಟೆಕ್ನಿಕಲ್ ಸೆಲ್ ಕಾರವಾರ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ