LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ರಾಜಸ್ಥಾನದ ಸರ್ಕಾರಿ ನೌಕರ ಅರೆಸ್ಟ್

ಜೈಪುರ : ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನದ ಸರ್ಕಾರಿ ನೌಕರನನ್ನ ಜೈಸಲ್ಮೇರ್‌ನಲ್ಲಿ ಅರೆಸ್ಟ್ ಮಾಡಲಾಗಿದೆ.

ಬಂಧಿತ ಸರ್ಕಾರಿ ನೌಕರನನ್ನು ಶಕುರ್ ಖಾನ್ ಮಂಗನಿಯಾರ್ ಎಂದು ಗುರುತಿಸಲಾಗಿದೆ. ಜೈಸಲ್ಮೈರ್‌ನಲ್ಲಿರುವ ಕಚೇರಿಯಲ್ಲೇ ಸಿಐಡಿ ಮತ್ತು ಗುಪ್ತಚರ ಸಂಸ್ಥೆಗಳ ತಂಡವು ಜಂಟಿಯಾಗಿ ಬಂಧಿಸಿವೆ.

ರಾಜಸ್ಥಾನದಲ್ಲಿ ಸರ್ಕಾರಿ ನೌಕರನಾಗಿದ್ದ ಶಕುರ್ ಖಾನ್ ಗಡಿ ಪ್ರದೇಶದ ಬರೋಡಾ ಗ್ರಾಮದವನು. ಈತನ ಮೇಲೆ ಬಹಳ ದಿನಗಳಿಂದ ನಿಗಾ ಇಡಲಾಗಿತ್ತು. ಸದ್ಯ ಹೆಚ್ಚಿನ ವಿಚಾರಣೆಗಾಗಿ ಜೈಪುರಕ್ಕೆ ಸ್ಥಳಾಂತರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಎರಡೂ ತನಿಖಾ ತಂಡಗಳು ಜಂಟಿಯಾಗಿಯೇ ವಿಚಾರಣೆ ನಡೆಸಲಿವೆ. ಪ್ರಾಥಮಿಕ ವಿಚಾರಣೆ ವೇಳೆ ಆರೋಪಿ ದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್‌ನೊಂದಿಗೆ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ.

ಅಲ್ಲದೇ ಪಾಕಿಸ್ತಾನಕ್ಕೆ ಸಂಬಂಧಿಸಿದ ಹಲವಾರು ಫೋನ್ ಸಂಖ್ಯೆಗಳು (+92 ರಿಂದ ಪ್ರಾರಂಭವಾಗುವ ಮೊಬೈಲ್ ಸಂಖ್ಯೆಗಳು) ಇತನ ಮೊಬೈಲ್‌ನಲ್ಲಿ ಪತ್ತೆಯಾಗಿದೆ. ಜೊತೆಗೆ ಕಳೆದ ಕೆಲ ವರ್ಷಗಳಲ್ಲಿ 7 ಬಾರಿ ಪಾಕಿಸ್ತಾನಕ್ಕೆ ಭೇಟಿ ನೀಡಿರುವುದಾಗಿ ಶಕುರ್ ಖಾನ್ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಎಂದು ವರದಿಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026