LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀನಾಥ್ ನಗರಗದ್ದೆ ಸೇರಿ ಮೂವರ ಬಂಧನ

ಬೆಂಗಳೂರು,ಏ.06: ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಲ್ಲೇಶ್ವರಂ ಪೊಲೀಸ್ ವಸತಿಗೃಹದ ಜಾಗವನ್ನು ಆರೋಪಿ ಗಳು ಕಬಳಿಸಲು ಯತ್ನಿಸಿದ್ದಾರೆಂದು ಆರೋಪಿಸಿ ಬೆಂಗಳೂರು ದಕ್ಷಿಣ ಜಿಲ್ಲೆಯ ಲೋಕಾಯುಕ್ತ ಇನ್ಸ್‌ಪೆಕ್ಟರ್ ಎಂ.ಕುಮಾರ್ ನೀಡಿದ ದೂರಿನ ಮೇರೆಗೆ  ಎಫ್ ಐ ಆರ್ ದಾಖಲಿಸಿಕೊಂಡ ಪೊಲೀಸರು ಶಿವಮೊಗ್ಗ ಮೂಲದ ಬಿಜೆಪಿ ಮುಖಂಡ ಶ್ರೀನಾಥ್ ನಗರಗದ್ದೆ  ಸೇರಿದಂತೆ ಮೂವರನ್ನು ಬಂಸಿದ್ದಾರೆ.
ತುಮಕೂರು ಮೂಲದ ಕೃಷ್ಣಮೂರ್ತಿ, ಶಿವಮೊಗ್ಗದ ಶ್ರೀನಾಥ್ ನಗರಗದ್ದೆ  (ಬಿಜೆಪಿ ಮುಖಂಡ) ಮತ್ತು ಕಿಶನ್‌ರನ್ನು ಬಂಸಿರುವ ಬೆಂಗಳೂರು ಮಲ್ಲೇಶ್ವರದ ಪೊಲೀಸರು ಕಂಬಿಗಳ ಹಿಂದೆ ಕಳುಹಿಸಿದ್ದಾರೆ. ಪೊಲೀಸ್ ಇಲಾಖೆಗೆ ಸೇರಿದ ಜಾಗವನ್ನು ಈಗಾಗಲೇ 1913 ರ ಮಾಪನ ನಕ್ಷೆಯಲ್ಲಿಯೇ ಪೊಲೀಸ್ ವಸತಿಗೃಹವೆಂದು ಗುರುತಿಸಿದ್ದು, ಇದು ಸುಮಾರು 80 ಕೋಟಿ ಮೌಲ್ಯದ ಆಸ್ತಿಯಾಗಿದೆ. ಪ್ರಸ್ತುತ ಇಲ್ಲಿ ಈ ಸ್ಥಳದಲ್ಲೀಗ ನಾಲ್ವರು ಇನ್ಸ್‌ಪೆಕ್ಟರ್‌ಗಳ ಕುಟುಂಬ ಹಾಗೂ ಸಿಬ್ಬಂದಿ ವಾಸಿಸುತ್ತಿದ್ದಾರೆ. ಆದರೆ, ಇತ್ತೀಚೆಗೆ ಅಲ್ಲೇ ವಾಸವಿರುವ ಇನ್ಸ್‌ಪೆಕ್ಟರ್ ಕುಮಾರ್ ಮನೆಗೆ ವಿದ್ಯುತ್ ಬಿಲ್ ಬಂದಿದ್ದು, ಅದರಲ್ಲಿ ಮಹಾಲಕ್ಷ್ಮೀ ಎಂಬ ಖಾಸಗಿ ಹೆಸರಿತ್ತು.
ಅನುಮಾನಗೊಂಡ ಕುಮಾರ್ ಬೆಸ್ಕಾಂ, ಜಿಬಿಎ, ಉಪ ನೋಂದಣಿ ಕಚೇರಿಗಳಿಗೆ ಭೇಟಿ ನೀಡಿ ವಿಚಾರಣೆ ಆರಂಭಿಸಿದಾಗ ಅಕ್ರಮವಾಗಿ ದಾಖಲೆಗಳನ್ನು ಸೃಷ್ಟಿಸಿ ಮಹಾಲಕ್ಷ್ಮೀ ಎಂಬ ಹೆಸರಿಗೆ ವರ್ಗಾವಣೆ ಮಾಡಲಾಗಿರುವುದು ಕಂಡು ಬಂದಿದೆ. ಜೊತೆಗೆ, ಜಿಬಿಎ ಮೂಲಕ ಅಕ್ರಮವಾಗಿ ಇ-ಖಾತಾ ಮಾಡಿಸಿರುವುದು ಹಾಗೂ ಮಾರಾಟ ಮಾಡಲು ಒಪ್ಪಂದ ಪತ್ರ ಕೂಡ ಮಾಡಲಾಗಿತ್ತು.ಆಸ್ತಿ ವರ್ಗಾವಣೆಗೊಂಡಿರುವ ಮಹಾಲಕ್ಷ್ಮಿ ವಯೋವೃ ದ್ಧರಾಗಿದ್ದಾರೆ. ಆ ಆಸ್ತಿ ಕಬಳಿಕೆ ವಿಚಾರ ಈ ಮಹಾಲಕ್ಷ್ಮಿ ಯವರ ಗಮನದಲ್ಲೇ ಇರ ಲಿಲ್ಲ. ಆದರೆ, ಆರೋಪಿಗಳು ಅಕ್ರಮ ದಾಖಲೆ ಸೃಷ್ಟಿಸಿ ಅವರ ಹೆಸರಿಗೆ ಆಸ್ತಿ ವರ್ಗಾ ವಣೆ ಮಾಡಿದ್ದು ತನಿಖೆಯಲ್ಲಿ ತಿಳಿದು ಬಂದಿದೆ.
ಸ್ಥಳ ಪರಿಶೀಲನೆ ಮಾಡದೇ ನಕಲಿ ದಾಖಲೆ ಗಳನ್ನೇ ನೋಡಿ ಇ-ಖಾತಾ ಮಾಡಿಕೊಟ್ಟ, ವಿದ್ಯುತ್ ಬಿಲ್ ವರ್ಗಾವಣೆ ಮಾಡಿಕೊಟ್ಟ ಜಿಬಿಎ ಮತ್ತು ಬೆಸ್ಕಾಂ ಅಕಾರಿಗಳಿಗೂ ಪೊಲೀಸರು  ನೋಟಿಸ್ ನೀಡಿದ್ದಾರೆ. ಶ್ರೀನಾಥ್ ನಗರಗದ್ದೆ ಗ್ಯಾಂಗಿನ ಹಿಂದೆ ಬಹುದೊಡ್ಡ ಜಾಲವೇ ಇರುವ ಬಗ್ಗೆ, ಈ ಜಾಲದ ಒಳಗೆ ಸರ್ಕಾರಿ ಇಲಾಖೆಗಳ ಅಕಾರಿಗಳ ಕೈವಾಡದ ಶಂಕೆಯನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಆರೋಪಿಗಳು ಎಲ್ಲೆಲ್ಲಿ ಭೂ ಕಬಳಿಕೆ ಮಾಡಿದ್ದಾರೆಂಬ ಬಗ್ಗೆಯೂ ತನಿಖೆ ನಡೆದಿದೆ.
ಶ್ರೀನಾಥ್ ನಗರಗದ್ದೆಯೇ ಈ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾಗುತ್ತಿದ್ದು,. ಈತ ಕೆ.ಎಸ್.ಈಶ್ವರಪ್ಪನವರು ಉಪಮುಖ್ಯ ಮಂತ್ರಿ ಗಳಾಗಿದ್ದ ಸಂದರ್ಭದಲ್ಲಿ ಅವರ ವಿಶೇಷ ಕರ್ತವ್ಯಾದಿಕಾರಿಯಾಗಿ ಕಾರ್ಯನಿರ್ವಹಿಸಿದ್ದ.  ಬಿಜೆಪಿ ಮುಖಂಡನಾಗಿ ಕಾರ್ಯ ನಿರ್ವಹಿಸುತ್ತಿದ್ದ ಈತ ಶಿವಮೊಗ್ಗದಲ್ಲಿ ಖಾಸಗಿ ಶಾಲೆಯೊಂದನ್ನು ಸಹ ನಡೆಸುತ್ತಿದ್ದಾನೆ.
ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾದಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀನಾಥ್ ನಗರ ಗದ್ದೆ, ರಾಜಕೀಯ ನಾಯಕರೊಂದಿಗೆ ವಿಶ್ವಾಸ ಗಳಿಸಿದ್ದಾನೆ. ಅಲ್ಲದೇ ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿದ್ದಾನೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST