LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುನಿರತ್ನ ಮೇಲೆ ಮೊಟ್ಟೆ ಎಸೆದ ಮೂವರ ಬಂಧನ

ಬೆಂಗಳೂರು,ಡಿ.25 : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಸಿದಂತೆ ಮೂವರನ್ನು ಬಂಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಕ್ಷ್ಮಿದೇವಿ ನಗರ ವಾರ್ಡ್ ನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ಮುನಿರತ್ನ ಅವರ ತಲೆಗೆ ಮೊಟ್ಟೆ ಹೊಡೆಯಲಾಗಿದೆ ಎಂದು ಪೊಲೀಸ್ ಅಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳಕ್ಕೆ ನಂದಿನಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಘಟನೆಗೆ ಕಾಂಗ್ರೆಸ್ ಮುಖಂಡ ರಾದ ಕುಸುಮಾ ಹಾಗೂ ಹನುಮಂತರಾಯಪ್ಪ ಕಾರಣ ಎಂದು ಆರೋಪಿಸಿರುವ ಮುನಿರತ್ನ, ನನ್ನನ್ನು ಕೊಲೆ ಮಾಡಲು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸುರೇಶ್ ಯತ್ನಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದು ನನ್ನನ್ನು ಕೊಲ್ಲುವ ಪ್ರಯತ್ನವಾಗಿದೆ.

ನನ್ನನ್ನು ಮುಗಿಸಲು ಸುಮಾರು 150 ಜನರನ್ನು ಕರೆಸಿದ್ದಾರೆ. ನನ್ನ ಬೆಂಬಲಿಗರು ಮತ್ತು ಪೊಲೀಸರು ಇಲ್ಲದಿದ್ದರೆ ನನ್ನನ್ನು ಹತ್ಯೆ ಮಾಡುತ್ತಿದ್ದರು. ಡಿಕೆ ಶಿವಕುಮಾರ್, ಡಿಕೆ ಸುರೇಶ್, ಹನುಮಂತರಾಯಪ್ಪ ಸೇರಿದಂತೆ ಕೆಲವರು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಮುನಿರತ್ನ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು ಆರೋಪವನ್ನು ತಳ್ಳಿಹಾಕಿದರು. ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ 1924 ರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಗೆ ತಯಾರಿ ನಡೆಸುತ್ತಿರುವು ದಾಗಿ ಹೇಳಿದರು.

ಮುನಿರತ್ನ ಅವರು ತಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಸುರೇಶ್ ಆರೋಪವನ್ನು ತಳ್ಳಿಹಾಕಿ ದರು. ಮತ್ತೊಂದೆಡೆ ಗೃಹ ಸಚಿವ ಪರಮೇಶ್ವರ ಅವರು ಪ್ರಕರಣ ಸಂಬಂಧ ಮೂವರನ್ನು ಬಂಸಲಾಗಿದೆ. ಅವರು ಯಾರು ಮತ್ತು ಯಾಕೆ ಹೀಗೆ ಮಾಡಿದ್ದಾರೆ ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದರು.

ಶಾಸಕ ಮುನಿರತ್ನ ರವರಿಗೆ ಮೊಟ್ಟೆ ಎಸೆದ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರಿಗೆ ಮೊಟ್ಟೆ ಎಸದವರು ಯಾರು ಹಾಗೂ ಯಾವ ಪಕ್ಷಕ್ಕೆ ಸೇರಿದವರು  ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಈ ಬಗ್ಗೆ ಪೊಲೀಸರು ತನಿಖೆ ಮಾಡಲಿದ್ದಾರೆ.
-ಸಿದ್ದರಾಮಯ್ಯ, ಸಿಎಂ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST