LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳ ಮೂವರು ಉಗ್ರರು ಅರೆಸ್ಟ್

ಇಂಫಾಲ : ಮಣಿಪುರದ ಪಶ್ಚಿಮ ಮತ್ತು ಪೂರ್ವ ಇಂಫಾಲ ಜಿಲ್ಲೆಯಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಮೂವರು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಿಷೇಧಿತ ಸಂಘಟನೆ ಪೀಪಲ್ಸ್ ಲಿಬರೇಶನ್ ಆರ್ಮಿಗೆ (ಪಿಎಲ್‌ಎ) ಸೇರಿದ ದಂಗೆಕೋರನನ್ನು ಪಶ್ಚಿಮ ಇಂಫಾಲ ಜಿಲ್ಲೆಯ ಲ್ಯಾಲ್ಡಿಂಗ್ ಅವಾಂಗ್ ಲೈಕೈನಿಂದ ಬಂಧಿಸಲಾಗಿದೆ. ಬಂಧಿತನನ್ನು ಯುಮ್ನಾಮ್ ಪ್ರೇಮ್‌ಕುಮಾರ್ ಸಿಂಗ್ (31) ಎಂದು ಗುರುತಿಸಲಾಗಿದೆ. ಈತ ಸರ್ಕಾರಿ ಮತ್ತು ಖಾಸಗಿ ಶಾಲೆ ಸೇರಿದಂತೆ ಇತರೆ ಸಂಸ್ಥೆಗಳಿಂದ ಸುಲಿಗೆ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ನಿಷೇಧಿತ ಪ್ರೆಪಕ್-(ಪ್ರೊ) ಸಂಘಟನೆಯ ಸಕ್ರಿಯ ಕಾರ್ಯಕರ್ತನನ್ನು ಪಶ್ಚಿಮ ಇಂಫಾಲ ಜಿಲ್ಲೆಯ ಹೈರಂಗೋಯಿಥಾಂಗ್‌ನಿಂದ ಬಂಧಿಸಲಾಗಿದೆ. ಕೆಸಿಪಿನ (ಎಂಎಫ್‌ಎಲ್) ಮತ್ತೊಬ್ಬ ಉಗ್ರನನ್ನು ಪೂರ್ವ ಇಂಫಾಲ ಜಿಲ್ಲೆಯ ನಾಂಗ್‌ಪೋಕ್ ಸಂಜೆನ್‌ಬಾಮ್ ಖುಲ್ಲೆನ್‌ನಿಂದ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಬಿಷ್ಣುಪುರ ಜಿಲ್ಲೆಯ ಟೆರಾಖೋಂಗ್‌ಶಾಂಗ್ಲಿ ಮಾನಿಂಗ್ ಲೈಥೆಲ್‌ನಲ್ಲಿ ಇರಿಸಲಾಗಿದ್ದ 51 ಎಂಎಂ ಐಎಲ್‌ಎಲ್‌ಜಿ ಬಾಂಬ್ ಅನ್ನು ಬಾಂಬ್ ನಿಷ್ಕ್ರಿಯ ತಂಡವು ನಿಷ್ಕ್ರಿಯಗೊಳಿಸಿದೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026