Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮುಂಗಾರು ಆಗಮನ.. ಚುರುಕು ಗೊಂಡ ಕೃಷಿ ಚಟುವಟಿಕೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿಚಟುವಟಿಕೆಗಳು ಬಿರುಸುಗೊಂಡಿದ್ದು, ರೈತರು ಡಿಎಪಿ ರಸಗೊಬ್ಬರ ಬದಲಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ ನೀಡಲಾಗಿದೆ.

ಸಸ್ಯಗಳ ಬೆಳವಣಿಗೆಗೆ 17 ಪೋಷಕಾಂಶಗಳ ಅಗತ್ಯವಿದೆ. ಅವುಗಳಲ್ಲಿ ಗಾಳಿ ಮತ್ತು ನೀರಿನ ಮೂಲಕ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಉಳಿದ 14 ಪೋಷಕಾಂಶಗಳಿಗೆ ಸಂಯುಕ್ತ ರಸಗೊಬ್ಬರ ಬಳಕೆ ಮಾಡಬೇಕು ಎಂದು ಮಾಹಿತಿ ನೀಡುವುದರ ಜೊತೆಯಲ್ಲಿ ಸಾರಜನಕ, ರಂಜಕ, ಪೊಟ್ಯಾಷ್, ಕ್ಯಾಲ್ಸಿಯಂ, ಮೆಗ್ನಿಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ ಮ್ಯಾಂಗನೀಸ್, ಮಾಲಿಬಿನಂ ಕ್ಲೋರಿನ್ ಹಾಗೂ ನಿಕ್ಕಲ್ ಅಗತ್ಯವಿದ್ದು, ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಲಿದ್ದು, ಇಳುವರಿ ಕುಂಠಿತವಾಗುತ್ತದೆ. ಆದ್ದರಿಂದ ಬಿತ್ತನೆಗೆ ಕೊಟ್ಟಿಗೆ ಗೊಬ್ಬರ/ಹಸಿರೆಲೆ ಗೊಬ್ಬರ/ಹಿಂಡಿ ಇತ್ಯಾದಿ ಸಾವಯವ ಗೊಬ್ಬರ ಬಳಕೆ ಮಾಡಬೇಕು. ಇದರಿಂದ ಇಳುವರಿ ಹೆಚ್ಚಾಗಲಿದೆ.

ಬಿತ್ತನೆ ಸಮಯದಲ್ಲಿ ಬೆಳೆಗಳಿಗೆ ಶಿಫಾರಸ್ಸಿನಂತೆ ಸಮತೋಲನಾತ್ಮಕ ರಸಗೊಬ್ಬರ ಬಳಸುವುದರಿಂದ ಸರಿದೂಗಿಸಬಹುದು. ಇದಕ್ಕಾಗಿ ರೈತರು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ವಿಧದ ರಸಗೊಬ್ಬರಕ್ಕೆ ಆದ್ಯತೆ ನೀಡದೆ  ಮಾರುಕಟ್ಟೆಯಲ್ಲಿ ದೊರೆಯುವ ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 17:17:17, 14:28:14, 19:19:19, 20:10:10, 14:35:14 ಸಹ ಬಳಸಬಹುದು. ಬಿತ್ತನೆ ನಂತರ ನ್ಯಾನೋ ಡಿಎಪಿ ಮತ್ತು ನ್ಯಾನೋ ಯೂರಿಯಾ ಪ್ಲಸ್ಗಳನ್ನು ಸಹ ಅವಶ್ಯಕತೆಗೆ ಅನುಗುಣವಾಗಿ ಸಿಂಪರಣೆಯಾಗಿ ಬಳಸಬಹುದು ಎಂದು ತಿಳಿಸಿದೆ.

ಸಾಮಾನ್ಯವಾಗಿ 1 ಹಕ್ಟೇರ್ ರಾಗಿ ಬೆಳೆ ಬೆಳೆಯಲು ಯೂರಿಯಾ ಮತ್ತು ಡಿ.ಎ.ಪಿ ಬಳಸಿದರೆ 1630ರೂ. ಬೇಸಾಯ ವೆಚ್ಚವಾಗುತ್ತದೆ. ರೈತರು ಯೂರಿಯಾ ಹಾಗೂ ಡಿಎಪಿಯನ್ನು ಹೆಚ್ಚಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೋಟ್ಯಾಷ್ ಲಭ್ಯವಿರುವುದಿಲ್ಲ. ಪ್ರತ್ಯೇಕವಾಗಿ ಪೋಟ್ಯಾಷ್ ಪೋಷಕಾಂಶ ಸೇರಿಸಲು 33 ಕೆ.ಜಿ ಎಂಒಪಿ ಬೇಕಾಗುತ್ತದೆ. 33 ಕೆ.ಜಿ ಎಂಒಪಿಗೆ 1132 ರೂ. ವೆಚ್ಚವಾಗುತ್ತದೆ. ಒಟ್ಟಾರೆ ಪ್ರತಿ ಹೆಕ್ಟೇರಿಗೆ 2761 ರೂ. ವೆಚ್ಚವಾಗುತ್ತದೆ.

ಇತರೆ ಸಂಯುಕ್ತ ರಸಗೊಬ್ಬರಗಳಾದ 14:35:14, 11:30:14, 10:26:26 ಬಳಸಿದ್ದಲ್ಲಿ ಎಲ್ಲಾ ಎನ್.ಪಿ.ಕೆ ಪೋಷಕಾಂಶಗಳು ಲಭ್ಯವಿದೆ.

ಪ್ರತಿ ಹೆಕ್ಟೇರಿಗೆ 2500ರೂ. ಗಿಂತ ಕಡಿಮೆ ವೆಚ್ಚವಾಗುತ್ತದೆ. ಸಂಯುಕ್ತ ರಸಗೊಬ್ಬರಗಳನ್ನು ಬಳಸುವುದರಿಂದ ಸಸಿಗಳಿಗೆ ಅವಶ್ಯವಿರುವ ಪೊಟ್ಯಾಷ್ ಪೋಷಕಾಂಶವು ಲಭ್ಯವಾಗಿ ಸಸಿಗಳಲ್ಲಿ ಕಿಣ್ವಗಳನ್ನು ಸಕ್ರಿಯಗೊಳಿಸಿ ನೀರು ಮತ್ತು ಪೋಷಕಾಂಶಗಳ ಸಾಗಣೆಗೆ ಸಹಾಯ ಮಾಡುವುದಲ್ಲದೇ ಬರ ಪರಿಸ್ಥಿತಿಯಲ್ಲೂ ಬೆಳೆಗಳನ್ನು ಹಸಿರಾಗಿಡಲು ಸಹಾಯ ಮಾಡುತ್ತದೆ ಹಾಗೂ ಬೆಳೆ ಉತ್ಪಾದಕತೆ, ಗುಣಮಟ್ಟ ಸುಧಾರಿಸಲು ಕಾರಣವಾಗುತ್ತದೆ. ಆದ್ದರಿಂದ ಜಿಲ್ಲೆಯ ಪ್ರಮುಖವಾದ ರಾಗಿ ಬೆಳೆಯ ಬೇಸಾಯ ವೆಚ್ಚ ಕಡಿಮೆ ಮಾಡಲು ಹಾಗೂ ಮಣ್ಣಿಗೆ ರಂಜಕದ ಪೋಷಕಾಂಶ ಸೇರಿಸುವ ಉದ್ದೇಶದಿಂದ ಡಿಎಪಿ ರಸಗೊಬ್ಬರದ ಬದಲಾಗಿ ಅಥವಾ ಪರ್ಯಾಯವಾಗಿ ಕಾಂಪ್ಲೆಕ್ಸ್ ರಸಗೊಬ್ಬರಗಳನ್ನು ಬಳಸಬೇಕು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ