Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಯಲ್ಲಾಪುರಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಶ್ರೀಗಳ ಆಗಮನ

ಶ್ರೀ ಶಿವಲಿಂಗಯ್ಯ ಅಲ್ಲಯ್ಯನವರಮಠ ಮನೆಗೆ ಆಗಮನ

 ಬಾಳೆಹೊನ್ನೂರು ಶ್ರೀ ರಂಭಾಪುರಿnews_1792774015_0_926.webp

ಯಲ್ಲಾಪುರ : ಪ್ರಥಮ ಬಾರಿ ಯಲ್ಲಾಪುರ ನಗರಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ

ವೀರಸಿಂಹಾಸನ ಮಹಾಸಂಸ್ಥಾನದ ಜಗದ್ಗುರು ಶ್ರೀ ಶ್ರೀ ಶ್ರೀ 1008 ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಅ. 24ರಂದು ಯಲ್ಲಾಪುರದ ಕಲ್ಮಠದ ಶಿವಸಾನಿಧ್ಯ ಸಭಾಭವನದಲ್ಲಿ ನಡೆಯುವ ಧರ್ಮಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಲಿಂಗಯ್ಯ ಅಲ್ಲಯ್ಯನವರಮಠ, ಅಂದು ಬೆಳಿಗ್ಗೆ 9 ಗಂಟೆಗೆ ಶ್ರೀಗಳು ಇಷ್ಟಲಿಂಗ ಮಹಾಪೂಜೆ ನೆರವೇರಿಸಲಿದ್ದು, ಬಳಿಕ ಭಕ್ತರಿಗೆ ಆಶೀರ್ವಚನ ನೀಡಲಿದ್ದಾರೆ ಎಂದು ತಿಳಿಸಿದರು.

ಧರ್ಮಸಭೆಯಲ್ಲಿ ಸಮಾಜದ ಬಂಧುಗಳು ಹಾಗೂ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆಯಬೇಕು ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಗಜಾನನ ನಾಯ್ಕ ತಳ್ಳಿಕೇರಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST