LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆರ್ಯವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮ: ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

 

ಚಿತ್ರದುರ್ಗ: ಕರ್ನಾಟಕ ಆರ್ಯವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ http//kacdc.karnatka.gov.in  ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು: ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-“ಜಿ”ಯಲ್ಲಿ  ಪಡೆದಿರಬೇಕು. ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33 , ವಿಶೇಷ ಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸಾಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಅರಿವು ಶೈಕ್ಷಣಿಕ  ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.

ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳ ಮಾರ್ಗಸೂಚಿ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಅರ್ಹತೆಗಳ ಸಂಕ್ಷಿಪ್ತ  ವಿವರಗಳಿಗೆ http//kacdc.karnatka.gov.in    ಹಾಗೂ ನಿಗಮದ ಸಹಾಯವಾಣಿ 9448451111 ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಹೆಚ್.ಶಿಲ್ಪ  ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026