LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ'-ಸಿ.ಎಂ

ತುಮಕೂರು :ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ.ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು.

ನಿಮ್ಮ ವಿಶೇಷ ಸಂಚಿಕೆ ನೀವೂ ಓದಿ

ಈಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆ ನೀವೂ ಓದಿ. ಪತ್ರಕರ್ತರ ಕರ್ತವ್ಯ , ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ ಎಂದರು, ಜನ ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಡ್ಯದ ಸುದ್ದಿಗಳನ್ನು , ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ ಎಂದರು.ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ , ಸವಾಲು ಎರಡೂ ಆಗಿದೆ ಎಂದರು.

ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು-ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ. ಜನ ನಿಮ್ಮ ಕಡೆ ನೋಡ್ತಾ ಇದ್ದಾರೆ. ಈ ಎಚ್ಛರಿಕೆ ಸದಾ ಇರಲಿ ಎಂದರು.

ಕೆಲವೇ ದಿನದಲ್ಲಿ ಬಸ್ ಪಾಸ್

ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ, ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಪತ್ರಕರ್ತರ ಮಾಸಾಶನವನ್ನೂ 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST