LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್

ಬೆಂಗಳೂರು : ಯುವಕರು ಪದವಿ ಪಡೆದರೆ ಯುವನಿಧಿ ಕೊಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ 8 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿದೆ. ರಾಜ್ಯ ಸರ್ಕಾರ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ ಕೊಡುತ್ತಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಭಾರೀ ಖತರ್ನಾಕ್‌ಗಳು. ಮೊದಲು ಮಂಡ್ಯ ವಿವಿ ಮುಚ್ಚುತ್ತಿದ್ದಾರೆ. ಮಂಡ್ಯ ಗಂಡು ನಾಡು. ಅಲ್ಲೇ ವಿವಿಗೆ ಕೊಡಲಿ ಪೆಟ್ಟು ಹಾಕುತ್ತಿದ್ದಾರೆ. ಮಾರಿ ಕಣ್ಣು ಹೋರಿ ಮೇಲೆ ಅನ್ನುವಂತೆ ಸಿದ್ದರಾಮಯ್ಯ ಕಣ್ಣು ವಿವಿಗಳ ಮೇಲೆ ಬಿದ್ದಿದೆ. 9 ವಿವಿಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ನಿರ್ಧಾರವನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ ಎಂದು ಕಿಡಿಕಾರಿದರು.

ಕೆಆರ್‌ಎಸ್ ಪಕ್ಕ ಅಮ್ಯೂಸ್ಮೆಂಟ್ ಪಾರ್ಕ್ ಮಾಡುತ್ತಾರಂತೆ. ಇದಕ್ಕೆ 1000 ಸಾವಿರ ಕೋಟಿ ರೂ. ಕೊಡುತ್ತಿದ್ದಾರೆ. ಜಲಕ್ರೀಡೆಗೆ ಹಣ ನೀಡುತ್ತಾರೆ ಆದರೆ ವಿಶ್ವವಿದ್ಯಾಲಯ ಮುಚ್ಚಿಸುತ್ತಾರೆ. ಈ ಕಾಂಗ್ರೆಸ್‌ನವರು ಅಪರೂಪದ ಪೀಸ್‌ಗಳು. ವಿವಿ ಮುಚ್ಚುತ್ತೇವೆ ಎನ್ನುವವರು ವೈನ್ ಸ್ಟೋರ್, ಬಾರ್ ಗಳನ್ನು ಮುಚ್ಚಿ ನೊಡೋಣ. ಇದೇ ಕಾಂಗ್ರೆಸ್ ನೀತಿ. ನಮ್ಮ ವಿದ್ಯಾರ್ಥಿಗಳು ಅಧ್ಯಯನಕ್ಕೆ ಪರ ರಾಜ್ಯಕ್ಕೆ ಹೋಗಬೇಕೇ ಎಂದು ವಾಗ್ದಾಳಿ ನಡೆಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೈಕಮಾಂಡ್ ತೀರ್ಮಾನಿಸಿದರೆ ಐದು ವರ್ಷ ನಾನೇ ಸಿಎಂ: ಸಿದ್ದರಾಮಯ್ಯದೇಶದ 12 ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ.!ಮೊಂಥಾ ಚಂಡಮಾರುತ: ಅ. 31ರವರೆಗೂ ಭಾರೀ ಮಳೆ- ಹವಾಮಾನ ಇಲಾಖೆ ಎಚ್ಚರಿಕೆಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ​ ತರಾಟೆಅ. 28ರಂದು ಮೊಂಥಾ ಸೈಕ್ಲೋನ್- ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್ನ್ಯಾ. ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಹೆಸರಿಸಿದ ನ್ಯಾ. ಗವಾಯಿಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ರದ್ದು – ಕೆ.ಎಚ್‌.ಮುನಿಯಪ್ಪದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿವರ್ಕ್ ಫ್ರಂ ಹೋಂ ಕೆಲಸ: 12 ಕೋಟಿಗೂ ಅಧಿಕ ಹಣ ವಂಚನೆ.!ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲು.!