LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಅಶ್ವಿನ್ ವಿದಾಯ

ನವದೆಹಲಿ,ಡಿ.18 : 38  ವರ್ಷದ ಭಾರತೀಯ ಸ್ಪಿನ್ ದಿಗ್ಗಜ ರವಿಚಂದ್ರನ್ ಅಶ್ವಿನ್ ಅವರು ಬುಧವಾರ ಅಂತ ರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ನವೆಂಬರ್ 6, 2011 ರಂದು ದೆಹಲಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯದ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಆರ್ ಅಶ್ವಿನ್ ಅವರು 106 ಪಂದ್ಯಗಳಲ್ಲಿ 537  ವಿಕೆಟ್ ಗಳನ್ನು ಪಡೆದಿದ್ದಾರೆ.

ಆರ್ ಅಶ್ವಿನ್ ಅವರು ಭಾರತದ ಅತ್ಯಂತ ಯಶಸ್ವಿ ಬೌಲರ್ ಆಗಿ 619 ವಿಕೆಟ್‌ಗಳನ್ನು ಪಡೆದ ಅನಿಲ್ ಕುಂಬ್ಳೆ ನಂತರ ಎರಡನೇ ಸ್ಥಾನದಲ್ಲಿದ್ದಾರೆ.

ಹಾಗೆಯೇ 116 ಏಕದಿನ ಪಂದ್ಯಗಳಲ್ಲಿ 114 ಇನಿಂಗ್ಸ್ ಆಡಿರುವ ಅಶ್ವಿನ್ 6303  ಎಸೆತಗಳಲ್ಲಿ 156  ವಿಕೆಟ್ ಪಡೆದಿದ್ದಾರೆ. ಇನ್ನು 65  ಟಿ20  ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಸಿರುವ ಅಶ್ವಿನ್ 72 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲೂ 50 ಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ.

ಸದ್ಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಅಶ್ವಿನ್ ಸರಣಿ ಮುಕ್ತಾಯಕ್ಕೂ ಮುನ್ನವೆ ನಿವೃತ್ತಿಯ ನಿರ್ಧಾರ ಘೋಷಿಸಿದ್ದಾರೆ.

ಅಡಿಲೇಡ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಭಾಗವಹಿಸಿದ ನಂತರ ಅಶ್ವಿನ್ ನಿವೃತ್ತಿ ಘೋಷಿಸಿದರು. ಅನುಭವಿ ಆಫ್ ಸ್ಪಿನ್ನರ್ ೫ನೇ ದಿನದ ಚಹಾದ ನಂತರ ಮಳೆ ವಿರಾಮದ ಸಮಯದಲ್ಲಿ ಡ್ರೆಸ್ಸಿಂಗ್ ರೂಮ್‌ನಲ್ಲಿ ಹಿರಿಯ ಕ್ರಿಕೆಟಿಗ, ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರೊಂದಿಗೆ ಸುದೀರ್ಘ ಮಾತಕತೆ ನಡೆಸಿ, ಪರಸ್ಪರ ಅಪ್ಪಿಕೊಂಡ ಭಾವುಕ ಕ್ಷಣ ಕಂಡುಬಂದಿತ್ತು. ಆರ್. ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅನಿಲ್ ಕುಂಬ್ಳೆ ಬಳಿಕ ಅತಿ ಹೆಚ್ಚು ವಿಕೆಟ್ ಗಳಿಸಿದ ಭಾರತೀಯ ಬೌಲರ್ ಆಗಿದ್ದಾರೆ.

ಯುವ ಬೌಲರ್ ಆಗಿ ಕ್ರಿಕೆಟ್ ಜೀವನ ಆರಂಭಿಸಿದ ಅಶ್ವಿನ್ ಅವರು ಆಧುನಿಕ ಕ್ರಿಕೆಟ್‌ವರೆಗೂ ದಿಗ್ಗಜರಾಗಿ ಬೆಳೆದ ಹಾದಿಯನ್ನು ಗಮನಿಸಿದರೆ ಅವರ ಸಾಧನೆ ವರ್ಣನಾತೀತ.
-ಗೌತಮ್ ಗಂಭೀರ್,
ಭಾರತ ತಂಡದ ಮುಖ್ಯ ಕೋಚ್
ನಿಮ್ಮ ಅದ್ಭುತ ಕ್ರಿಕೆಟ್‌ನ ಜೀವನಕ್ಕೆ ಅಭಿನಂದನೆಗಳು. ಕ್ರಿಕೆಟ್ ಜಗತ್ತಿನಲ್ಲಿ ಇನ್ನಷ್ಟು ಉಜ್ವಲ ಭವಿಷ್ಯ ನಿಮ್ಮದಾಗಲಿ.
-ಅನಿಲ್ ಕುಂಬ್ಳೆ,
ಮಾಜಿ ಆಟಗಾರ
* 106 ಟೆಸ್ಟ್ ಪಂದ್ಯಗಳಲ್ಲಿ 537  ವಿಕೆಟ್ ಗಳಸಿದ್ದಾರೆ.
* ಟೆಸ್ಟ್ ಕ್ರಿಕೆಟ್‌ನಲ್ಲಿ ಆರು ಶತಕಗಳನ್ನು ಗಳಿಸಿದ್ದಾರೆ.
* ಟೆಸ್ಟ್ ಕ್ರಿಕೆಟ್‌ನಲ್ಲಿ 37 ಸಲ ಐದು ವಿಕೆಟ್ ಗಳಿಸಿದ್ದಾರೆ.
* 116 ಏಕದಿನದಲ್ಲಿ 156  ವಿಕೆಟ್ ಗಳಿಸಿದ್ದಾರೆ. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST