Asia Cup 2023 | INDvsPAK: ಇಂದು ಹೈವೋಲ್ಟೇಜ್ ಮ್ಯಾಚ್
ಕೊಲಂಬೊ: ಏಷ್ಯಾಕಪ್ 2023ರ ಟೂರ್ನಿಯ ಸೂಪರ್-4 ಹಂತದ ಭಾಗವಾಗಿ ಇಂದು ನಡೆಯಲಿರುವ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿ ಆಗಲಿದೆ. ಶ್ರೀಲಂಕಾ ರಾಜಧಾನಿ ಕೊಲಂಬೊದ ಆರ್. ಪ್ರೇಮದಾಸ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಸೂಪರ್-4ನಲ್ಲಿ ಈಗಾಗಲೇ ಮೊದಲ ಪಂದ್ಯ ಗೆದ್ದಿರುವ ಬಾಬರ್ ಪಡೆ ಮತ್ತೊಂದು ಜಯದತ್ತ ಕಣ್ಣಿಟ್ಟಿದ್ದರೆ, ಇತ್ತ ಟೀಮ್ ಇಂಡಿಯಾ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ವಿಶೇಷವೆಂದರೆ ಇಂದಿನ ಪಂದ್ಯಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಲಭ್ಯವಿದ್ದಾರೆ. ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ. ಪಾಕಿಸ್ತಾನ್ ತಂಡ: ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಅಬ್ದುಲ್ಲಾ ಶಫೀಕ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಖರ್ ಅಹ್ಮದ್, ಇಮಾಮ್-ಉಲ್-ಹಕ್, ಮೊಹಮ್ಮದ್ ಹ್ಯಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಂ ಶಾ, ಸಲ್ಮಾನ್ ಅಲಿ ಅಘಾ, ಸೌದ್ ಶಕೀಲ್, ಶಾಹೀನ್ ಅಫ್ರಿದಿ ಮತ್ತು ಉಸಾಮಾ ಮಿರ್, ತಯ್ಯಬ್ ತಾಹಿರ್ (ಮೀಸಲು ಆಟಗಾರ).
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.