LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸರ್ಕಾರದ ಮನವೊಲಿಕೆ ಬಳಿಕ ಕರ್ತವ್ಯಕ್ಕೆ ಹಾಜರಾದ ಎಎಸ್‌ಪಿ ನಾರಾಯಣ ಭರಮನಿ

ಬೆಂಗಳೂರು: ನಾರಾಯಣ ಬರಮನಿ ಪ್ರಕರಣದಿಂದ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದ ಸರ್ಕಾರ ಕೊನೆಗೂ ಮುಜುಗರದಿಂದ ಬಚಾವಾಗಿದೆ.

ಧಾರವಾಡ ಎಎಸ್‌ಪಿ ನಾರಾಯಣ ಬರಮನಿ ಕೆಲಸಕ್ಕೆ ಹಾಜರಾಗಿದ್ದು ಸ್ವಯಂ ನಿವೃತ್ತಿ ಮನವಿಯನ್ನು ಸರ್ಕಾರ ಬದಿಗೆ ಸರಿಸಿದೆ. ಸಿಎಂ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ್ ಮನವೊಲಿಕೆಯ ನಂತರ ನಾರಾಯಣ ಬರಮನಿ ಕೆಲಸಕ್ಕೆ ಹಾಜರಾಗಿದ್ದಾರೆ. ಸ್ವಯಂ ನಿವೃತ್ತಿ ಮನವಿಗೆ ಸೋಮವಾರ ಡೆಡ್ ಲೈನ್ ಇತ್ತು. ಇನ್ನೂ ಮೂರು ವರ್ಷ ನಾರಾಯಣ ಬರಮನಿ ಸೇವೆ ಸಲ್ಲಿಸಲಿದ್ದಾರೆ.

ಬಹಿರಂಗವಾಗಿ ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಅವಮಾನಿತರಾಗಿದ್ದ ಎಎಸ್‌ಪಿ ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿಗೆ ಮುಂದಾಗಿದ್ದರು. ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿದ್ದ ನಾರಾಯಣ ಬರಮನಿ ಅವರನ್ನು ವೇದಿಕೆಗೆ ಕರೆಸಿದ್ದ ಸಿಎಂ ಅಡ್ಡಿಪಡಿಸಲು ಪ್ರತಿಭಟನಾಕಾರರಿಗೆ ಯಾಕೆ ಅವಕಾಶ ನೀಡಿದ್ದೀರಿ ಎಂದು ಪ್ರಶ್ನಿಸಿ ಸಾರ್ವಜನಿಕವಾಗಿ ಹೊಡೆಯಲು ಕೈಎತ್ತಿದ್ದರು. ಸಾರ್ವಜನಿಕವಾಗಿ ಮುಜುಗರಕ್ಕೆ ಒಳಗಾದ ನಂತರ ಬರಮನಿ ಅವರು ಸ್ವಯಂ ನಿವೃತ್ತಿಗೆ ಮನವಿ ಸಲ್ಲಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026